ಹೆಣ್ಣುಮಕ್ಕಳಿಗೆ ಗುಡ್ ನ್ಯೂಸ್ : ವಿಶಿಷ್ಟ ಮಹಿಳಾ ವಸ್ತು ಸಂಗ್ರಹಾಲಯ ಸಿದ್ಧ

ಶನಿವಾರ, 19 ಸೆಪ್ಟಂಬರ್ 2020 (19:35 IST)
ಇಡೀ ದೇಶದಲ್ಲಿಯೇ ವಿಶಿಷ್ಟವಾಗಿರುವ ಮಹಿಳಾ ವಸ್ತುಸಂಗ್ರಹಾಲಯ ಕೆಲವೇ ತಿಂಗಳುಗಳಲ್ಲಿ ಕಾರ್ಯಾರಂಭ ಮಾಡಲಿದೆ.

ಮಹಿಳಾ ಸಬಲೀಕರಣದ ಉದ್ದೇಶದಿಂದ ಆರಂಭವಾಗಿರುವ ಕರ್ನಾಟಕ ರಾಜ್ಯ ಅಕ್ಕಮಹಾದೇವಿ ಮಹಿಳಾ ವಿಶ್ವವಿದ್ಯಾನಿಲಯದ ಆವರಣದಲ್ಲಿ ಇನ್ನು ಕೆಲವೇ ತಿಂಗಳುಗಳಲ್ಲಿ ಇಡೀ ದೇಶದಲ್ಲಿಯೇ ವಿಶಿಷ್ಟವಾಗಿರುವ ಮಹಿಳಾ ವಸ್ತುಸಂಗ್ರಹಾಲಯ ಕಾರ್ಯಾರಂಭ ಮಾಡಲಿದೆ ಎಂದು ಹಂಗಾಮಿ ಕುಲಪತಿ ಪ್ರೊ.ಓಂಕಾರ ಕಾಕಡೆ ತಿಳಿಸಿದ್ದಾರೆ.

ವಿಜಯಪುರದ ಜ್ಞಾನಶಕ್ತಿ ಆವರಣದಲ್ಲಿ ಹಮ್ಮಿಕೊಂಡಿದ್ದ ವಿವಿಯ 11ನೆಯ ಘಟಿಕೋತ್ಸವದಲ್ಲಿ ಮಾತನಾಡಿದ ಅವರು, ವಸ್ತು ಸಂಗ್ರಹಾಲಯದ ರೂಪರೇಷೆಗಳ ನೀಲನಕ್ಷೆಯನ್ನು ತಜ್ಞರು ಸಿದ್ಧಪಡಿಸಿದ್ದಾರೆ.

ಈ ಯೋಜನೆಯಲ್ಲಿ ಮಹಿಳೆಯರ ಜ್ಞಾನ, ಕೌಶಲ್ಯ ಮತ್ತು ಸಮಾಜಕ್ಕೆ ಅವರ ಕೊಡುಗೆಯನ್ನು ಬಿಂಬಿಸುವ ರೀತಿಯಲ್ಲಿ ವಸ್ತುಸಂಗ್ರಹಾಲಯ ನಿರ್ಮಿಸುವುದು ವಿಶ್ವವಿದ್ಯಾನಿಲಯದ ಕನಸಾಗಿದೆ. ವಸ್ತು ಸಂಗ್ರಹಾಲಯದ ಕಟ್ಟಡ ನಿರ್ಮಾಣ ಬಹುತೇಕ ಪೂರ್ಣಗೊಳ್ಳುವ ಹಂತದಲ್ಲಿದೆ ಎಂದಿದ್ದಾರೆ.ವೆಬ್ದುನಿಯಾವನ್ನು ಓದಿ

ಸಂಬಂಧಿಸಿದ ಸುದ್ದಿ