ವಿಶ್ವವಿದ್ಯಾಲಯ ಹಾಗೂ ಕ್ರಿಸ್ಟು ಜಯಂತಿ ಕಾಲೇಜು ಜಂಟಿಯಾಗಿ ಶಿಕ್ಷಣ ನೀತಿ ಅನುಷ್ಠಾನ-2020
ಬೆಂಗಳೂರು ಉತ್ತರ ವಿಶ್ವವಿದ್ಯಾಲಯ ಹಾಗೂ ಕ್ರಿಸ್ಟು ಜಯಂತಿ ಕಾಲೇಜು ಜಂಟಿಯಾಗಿ ಕೊತ್ತನೂರಿನಲ್ಲಿ ಬುಧವಾರ ಆಯೋಜಿಸಿದ್ದ ರಾಷ್ಟ್ರೀಯ ಶಿಕ್ಷಣ ನೀತಿ ಅನುಷ್ಠಾನ-2020 ಕುರಿತ ರಾಷ್ಟ್ರೀಯ ವಿಚಾರ ಸಂಕಿರಣವನ್ನು ಉನ್ನತ ಶಿಕ್ಷಣ ಸಚಿವ ಡಾ.ಸಿ.ಎನ್. ಅಶ್ವತ್ಥನಾರಾಯಣ ಉದ್ಘಾಟಿಸಿದರು. ಕಾಲೇಜು ಮತ್ತು ತಾಂತ್ರಿಕ ಶಿಕ್ಷಣ ಇಲಾಖೆ ಆಯುಕ್ತ ಪಿ.ಪ್ರದೀಪ, ರಾಜ್ಯ ಉನ್ನತ ಶಿಕ್ಷಣ ಪರಿಷತ್ ಉಪಾಧ್ಯಕ್ಷ ಡಾ.ತಿಮ್ಮೇಗೌಡ, ಬೆಂಗಳೂರು ಉತ್ತರ ವಿವಿ ಹಂಗಾಮಿ ಕುಲಪತಿ ಡಾ.ಕುಮುದಾ, ಕ್ರಿಸ್ಟು ಜಯಂತಿ ಕಾಲೇಜಿನ ಪ್ರಾಂಶುಪಾಲರಾದ ಫಾದರ್ ಡಾ.ಆಗಸ್ಟೀನ್ ಜಾರ್ಜ್, ವಿಶ್ವವಿದ್ಯಾಲಯದ ಕುಲಸಚಿವ ಡಾ.ವೆಂಕಟೇಶಮೂರ್ತಿ ಇದ್ದರು.