ರಾಜ್ಯದಲ್ಲಿ ನಕಲಿ ಅಂಕಪಟ್ಟಿ ಹಗರಣ ತಡೆಗಟ್ಟಲು ವಿಶ್ವವಿದ್ಯಾಲಯಗಳಲ್ಲಿ ಅಂಕಪಟ್ಟಿ ವಿತರಣೆಯನ್ನು ಡಿಜಲಿಕರಣ ಮಾಡಲಾಗುವುದು ಎಂದು ಉನ್ನತ ವೈದ್ಯಕೀಯ ಶಿಕ್ಷಣ ಸಚಿವ ಅಶ್ವಥ್ ನಾರಾಯಣ್ ಹೇಳಿದ್ದಾರೆ.
ವಿಧಾನಪರಿಷತ್ ನಲ್ಲಿ ಇಂದು ನಡೆದ ಚರ್ಚೆಯ ವೇಳೆ ಕಾಂಗ್ರೆಸ್ ಸದಸ್ಯ ಬಿ.ಕೆ.ಹರಿಪ್ರಸಾದ್ ಕೇಳಿದ ಪ್ರಶ್ನೆಗೆ ಅವರು ಈ ರೀತಿ ಉತ್ತರಿಸಿದರು.
ರಾಜ್ಯದಲ್ಲಿ ನಕಲಿ ಅಂಕಪಟ್ಟಿ ಹಗರಣ ಸರಕಾರದ ಗಮನಕ್ಕೆ ಬಂದಿದೆಯಾ? ಬಂದಿದ್ದರೆ ಯಾವ ಕ್ರಮ ಕೈಗೊಂಡಿದ್ದೀರಿ ಎಂದು ಪ್ರಶ್ನಿಸಿದರು. ಇದಕ್ಕೆ ಉತ್ತರಿಸಿದ ಸಚಿವರು, ರಾಜ್ಯದಲ್ಲಿ ಇಂತಹ 3 ಪ್ರಕರಣಗಳು ಬೆಳಕಿಗೆ ಬಂದಿವೆ ಎಂದರು.
ನಕಲಿ ಅಂಕಪಟ್ಟಿ ಹಗರಣ ಹೊರಗಡೆ ನಡೆದಿದ್ದು, ಬೆಂಗಳೂರು ವಿವಿಯಲ್ಲಿ ನಡೆದಿಲ್ಲ. ಈ ಬಗ್ಗೆ ತನಿಖೆ ನಡೆಯುತ್ತಿದೆ. ಮುಂದಿನ ದಿನಗಳಲ್ಲಿ ಇದನ್ನು ತಡೆಯಲು ಡಿಜಿಲಿಕರಣ ಮಾಡಲಾಗುವುದು ಎಂದು ಸಚಿವರು ಭರವಸೆ ನೀಡಿದರು.