ಸ್ವಚ್ಚತೆಗಾಗಿ ಹಲವು ಕೆಲಸ ಕಾರ್ಯಗಳನ್ನು ಇ ಶೌಚಾಲಯ ಸಮರೋಪಾದಿಯಲ್ಲಿ ಮಾಡುತ್ತದೆ. ತಂತ್ರಜ್ಞಾನ ಆಧಾರಿತ ಸ್ವಯಂಪ್ರೇರಿತವಾಗಿ ಸ್ವಚ್ಛ ಸಾಮರ್ಥ್ಯವಿರುವ ಇ-ಶೌಚಾಲಯವನ್ನು ಉಳಿಸಿಕೊಳ್ಳುವುದು ಬಿಬಿಎಂಪಿಗೆ ದೊಡ್ಡ ತಲೆನೋವಾಗಿದೆ. ಬಿಬಿಎಂಪಿ ಕಳೆದ ಎರಡು ವರ್ಷಗಳ ಹಿಂದೆ ಸಾರ್ವಜನಿಕರಿಗೆ ಉಪಯೋಗವಾಗ್ಲಿ ಅನ್ನುವ ಉದ್ದೇಶದಿಂದ ಮತ್ತು ಪರಿಸರಸ್ನೇಹಿ ಮತ್ತು ಸಾರ್ವಜನಿಕರ ತುರ್ತು ಅಗತ್ಯಕ್ಕೆ ಪೂರಕವಾಗಿ ನಿರ್ಮಿಸಲಾಗಿತ್ತು. ಎರಡು ಹಂತಗಳಲ್ಲಿ 169 ಕಡೆ ಈ ಶೌಚಾಲಯವನ್ನು ಪ್ರಾರಂಭಿಸಿತ್ತು ಆದರೆ ಕೆಲವು ಕಡೆ ಇ ಶೌಚಾಲಯ ಕೆಟ್ಟು ನಿಂತರೆ ಮತ್ತೆ ಕೆಲವೆಡೆ ಸಾರ್ವಜನಿಕವಾಗಿ ಬಳಸಿಕೊಳ್ಳುತ್ತಿಲ್ಲ ಅನ್ನುವ ಮಾತು ಇದೆ.