ನನಗೆ ಕಾಂಗ್ರೆಸ್ ವರಿಷ್ಠರ ಸೂಚನೆ ಅಗತ್ಯವಿಲ್ಲ: ಸಿಎಂ ಸಿದ್ದರಾಮಯ್ಯ

ಶನಿವಾರ, 23 ಮೇ 2015 (15:20 IST)
ತಮಿಳುನಾಡು ಮುಖ್ಯಮಂತ್ರಿ ಜಯಲಲಿತಾ ಅವರು ಅಕ್ರಮ ಆಸ್ತಿ ಗಳಿಕೆ ಪ್ರಕರಣದಲ್ಲಿ ಖುಲಾಸೆಗೊಂಡಿರುವ ಹಿನ್ನೆಲೆಯಲ್ಲಿ ಸಿಎಂ ಸಿದ್ದರಾಮಯ್ಯ ಪ್ರತಿಕ್ರಿಯಿಸಿದ್ದು, ಪ್ರಕರಣ ಸಂಬಂಧ ಸುಪ್ರೀಂ ಕೋರ್ಟ್‌ನಲ್ಲಿ ಮೇಲ್ಮನವಿ ಸಲ್ಲಿಸಲು ಪಕ್ಷದ ವರಿಷ್ಠರ ಸೂಚನೆ ಅಗತ್ಯವಿಲ್ಲ. ಆದರೆ ಕಾನೂನು ತಜ್ಞರ ಸಲಹೆ ಕೇಳಿ ಬಳಿಕ ಮುಂದಿನ ನಿರ್ಧಾರ ಕೈಗೊಳ್ಳಲಿದ್ದೇನೆ ಎಂದರು. 
 
ರಾಷ್ಟ್ರ ರಾಜಧಾನಿ ದೆಹಲಿಯಲ್ಲಿ ಮಾಧ್ಯಮ ಪ್ರತಿನಿಧಿಗಳು ಜಯಲಲಿತಾ ಪ್ರಕರಣಕ್ಕೆ ಸಂಬಂಧಿಸಿದಂತೆ ನಿಮ್ಮ ಸ್ರಕಾರದ ನಿಲುವೇನು ಎಂದು ಕೇಳಿದ ಪ್ರಶ್ನೆಗೆ ಉತ್ತರಿಸಿದ ಅವರು, ಪ್ರಕರಣ ಸಂಬಂಧ ನಮ್ಮ ಪಕ್ಷದ ವರಿಷ್ಠರ ಅಪ್ಪಣೆ ಅಥವಾ ಸೂಚನೆ ಅಗತ್ಯವಿಲ್ಲ. ಆದರೆ ಈ ಬಗ್ಗೆ ಇನ್ನೂ ಯಾವುದೇ ನಿರ್ಧಾರವನ್ನು ಕೈಗೊಂಡಿಲ್ಲ. ಮುಂದಿನ ದಿನಗಳಲ್ಲಿ ಕಾನೂನು ತಜ್ಞರಿಂದ ಸೂಕ್ತ ಸಲಹೆ ಹಾಗೂ ಮಾಹಿತಿ ಪಡೆದು ಬಳಿಕ ಮೇಲ್ಮನವಿ ಬಗ್ಗೆ ನಿರ್ಧರಿಸಲಿದ್ದೇನೆ ಎಂದರು. 
 
ಇದೇ ವೇಳೆ ರಾಜ್ಯದಲ್ಲಿ ಒಂದಂಕಿ ಲಾಟರಿ ಪ್ರಕರಣದ ಸುದ್ದಿ ಕೇಳಿ ಬರುತ್ತಿರುವ ಹಿನ್ನೆಲೆಯಲ್ಲಿ ಪ್ರತಿಕ್ರಿಯಿಸಿದ ಅವರು, ಪ್ರಕರಣದಲ್ಲಿ ಪೊಲೀಸ್ ಇಲಾಖೆಯ ಹಿರಿಯ ಅಧಿಕಾರಿಗಳು ಶಾಮೀಲಾಗಿದ್ದಾರೆ ಎಂದು ನಾನೂ ಕೂಡ ಮಾಧ್ಯಮಗಳಿಂದ ತಿಳಿದಿದ್ದೇನೆ. ಆಧರೆ ಇಲ್ಲಿಯವರೆಗೂ ಕೂಡ ಸರ್ಕಾರದ ಅಧಿಕೃತ ವರದಿ ನನ್ನ ಕೈ ಸೇರಿಲ್ಲ. ಈ ಹಿನ್ನೆಲೆಯಲ್ಲಿ ನಾನು ಏನನನ್ನೂ ಪ್ರತಿಕ್ರಿಯಿಸಲಾರೆ ಎಂದರು. 

ವೆಬ್ದುನಿಯಾವನ್ನು ಓದಿ