ಮೋದಿ ಸರ್ಕಾರದಿಂದ ಉ.ಪ್ರದೇಶ ರೈತರ ಸಾಲ ಮನ್ನಾ: ರಾಜ್ಯದಲ್ಲಿ ರೈತರ ಆಕ್ರೋಶ

ಶುಕ್ರವಾರ, 17 ಮಾರ್ಚ್ 2017 (15:06 IST)
ಉತ್ತರಪ್ರದೇಶದಲ್ಲಿ ರೈತರ ಸಂಪೂರ್ಣ ಸಾಲ ಮನ್ನಾ ಮಾಡಲಾಗುವುದು ಎನ್ನುವ ಕೇಂದ್ರ ಸಚಿವ ರಾಧ ಮೋಹನ್ ಸಿಂಗ್ ಹೇಳಿಕೆ ರಾಜ್ಯದ ರೈತರಲ್ಲಿ ಆಕ್ರೋಶ ಮೂಡಿಸಿದೆ.
 
ಮುಖ್ಯಮಂತ್ರಿ ಸಿದ್ದರಾಮಯ್ಯ ರೈತರ ಅರ್ಧ ಸಾಲ ಮನ್ನಾ ಮಾಡುವಂತೆ ಕೋರಿ ಹಲವಾರು ಬಾರಿ ಕೇಂದ್ರ ಸರಕಾರಕ್ಕೆ ಮನವಿ ಮಾಡಿ ಪತ್ರ ಬರೆದಿದ್ದರೂ ಕ್ಯಾರೆ ಎನ್ನದ ಮೋದಿ ಸರಕಾರ, ಇದೀಗ ಉತ್ತರಪ್ರದೇಶ ರೈತರ ಸಂಪೂರ್ಣ ಸಾಲ ಮನ್ನಾ ಮಾಡಲು ಮುಂದಾಗಿರುವುದು ಕೋಲಾಹಲಕ್ಕೆ ಕಾರಣವಾಗಿದೆ. 
 
ಇತ್ತೀಚೆಗೆ ನಡೆದ ಉತ್ತರ ಪ್ರದೇಶ ವಿಧಾನಸಭೆ ಚುನಾವಣೆಯಲ್ಲಿ ಬಿಜೆಪಿ ಸರಕಾರ ಅಧಿಕಾರಕ್ಕೆ ಬಂದ್ರೆ ರೈತರ ಸಾಲ ಮನ್ನಾ ಮಾಡುವುದಾಗಿ ಪ್ರಧಾನಿ ಮೋದಿ ಘೋಷಿಸಿದ್ದರು. ಅದರಂತೆ, ರೈತರ ಸಂಪೂರ್ಣ ಸಾಲ ಮನ್ನಾ ಮಾಡಲು ಕೇಂದ್ರ ಸರಕಾರ ನಿರ್ಧರಿಸಿದೆ ಎಂದು ಮೂಲಗಳು ತಿಳಿಸಿವೆ.
 
ರಾಜ್ಯದ 176 ತಾಲೂಕುಗಳಲ್ಲಿ ಭೀಕರ ಬರಗಾಲವಿದ್ದರೂ ಪ್ರಧಾನಿ ಮೋದಿ ನೇತೃತ್ವದ ಸರಕಾರ ರೈತರ ಸಾಲ ಮನ್ನಾ ಮಾಡಲು ಸಿದ್ದವಿಲ್ಲ. ರೈತರ ಸಾಲ ಮನ್ನಾ ಮಾಡುವಲ್ಲಿ ರಾಜಕೀಯ ತಾರತಮ್ಯವೆಸಗುತ್ತಿದೆ ಎಂದು ರೈತ ಮುಖಂಡರು ಆಕ್ರೋಶ ವ್ಯಕ್ತಪಡಿಸಿದ್ದಾರೆ. 

ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ ಮೊಬೈಲ್ ಆ್ಯಪ್ ಡೌನ್‍ಲೋಡ್ ಮಾಡಿಕೊಳ್ಳಿ. 

ವೆಬ್ದುನಿಯಾವನ್ನು ಓದಿ