ಅಮೇರಿಕಾದ ಅಧ್ಯಕ್ಷರ ಭಾರತ ಭೇಟಿ ವಿಚಾರ; ಪ್ರಧಾನಿ ವಿರುದ್ಧ ಕಿಡಿಕಾರಿದ ಮಾಜಿ ಸಿಎಂ

ಮಂಗಳವಾರ, 18 ಫೆಬ್ರವರಿ 2020 (10:04 IST)
ಬೆಂಗಳೂರು : ಅಮೇರಿಕಾದ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಭಾರತಕ್ಕೆ ಭೇಟಿ ನೀಡುತ್ತಿರುವ ವಿಚಾರಕ್ಕೆ ಸಂಬಂಧಿಸಿದಂತೆ ಅಹಮದಾಬಾದ್ ನಲ್ಲಿ ಸ್ಲಂಗಳು ಕಾಣದಂತೆ ಗೋಡೆ ನಿರ್ಮಾಣ ಮಾಡುತ್ತಿದ್ದಾರೆ ಎಂದು ಮಾಜಿ ಸಿಎಂ ಹೆಚ್.ಡಿ.ಕುಮಾರಸ್ವಾಮಿ ಕಿಡಿಕಾರಿದ್ದಾರೆ.


ಈ ಬಗ್ಗೆ ಟ್ವೀಟ್ ಮಾಡಿರುವ ಕುಮಾರಸ್ವಾಮಿ, ಅಮೇರಿಕಾದ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಭಾರತಕ್ಕೆ ಭೇಟಿ ನೀಡುತ್ತಿರುವ ಕಾರಣ ಅಹಮದಾಬಾದ್ ನಲ್ಲಿ ಸ್ಲಂಗಳು ಕಾಣದಂತೆ ಪ್ರಧಾನಿ ಮೋದಿ ಗೋಡೆ ನಿರ್ಮಾಣ ಮಾಡುತ್ತಿದ್ದಾರೆ. ಕುಸಿದಿರುವ ಆರ್ಥಿಕತೆ ಕಾಣದಂತೆ ಯಾವ ಗೋಡೆ ಕಟ್ತಾರೆ? ಎಂದು ವ್ಯಂಗ್ಯ ಮಾಡಿದ್ದಾರೆ.


ದೇಶವ್ಯಾಪಿ ಭುಗಿಲೆದ್ದಿರುವ ಸಿಎಎ ವಿರೋಧಿ ಹೋರಾಟ ಕಾಣದಂತೆ ಯಾವ ಭದ್ರಕೋಟೆ ನಿರ್ಮಿಸುತ್ತಾರೆ? ದೇಶದಲ್ಲಿ ತಾಂಡವಾಡುತ್ತಿರುವ ಬಡತನ, ನಿರುದ್ಯೋಗ ಸಮಸ್ಯೆ ಮರೆ ಮಾಚಲು ಯಾವ ತಡೆಗೋಡೆ ನಿರ್ಮಿಸುತ್ತಾರೆ? ಮೋದಿಯವರೇ ಉತ್ತರಿಸುವಿರಾ? ಎಂದು ಆಕ್ರೋಶ ವ್ಯಕ್ತಪಡಿಸಿದ್ದಾರೆ.

ವೆಬ್ದುನಿಯಾವನ್ನು ಓದಿ

ಸಂಬಂಧಿಸಿದ ಸುದ್ದಿ