ಮಾಸ್ಕ್, ಹ್ಯಾಂಡ್ ಗ್ಲೌಸ್ ಬಳಸಿ: ಠಾಣೆಗೆ ಬನ್ನಿ ಎಂದ ಎಸ್ ಪಿ

ಶನಿವಾರ, 30 ಮೇ 2020 (20:50 IST)
ಕೋವಿಡ್-19 ಸೋಂಕಿನ ಹಿನ್ನೆಲೆಯಲ್ಲಿ ಪೊಲೀಸ್ ಅಧಿಕಾರಿಗಳ ಹಾಗೂ ಸಿಬ್ಬಂದಿಗಳ ಆರೋಗ್ಯ, ಸುರಕ್ಷತೆ ದೃಷ್ಠಿಯಿಂದ ಮುಂಜಾಗೃತಾ ಕ್ರಮವಾಗಿ ಸಾರ್ವಜನಿಕರು ಠಾಣೆಗೆ ಭೇಟಿ ನೀಡುವಾಗ ಕಡ್ಡಾಯವಾಗಿ ಕೆಲವು ನಿಯಮ ಅನುಸರಿಸಬೇಕು.

ಹೀಗಂತ ಉತ್ತರ ಕನ್ನಡ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಶಿವಪ್ರಕಾಶ್ ದೇವರಾಜು ಮನವಿ ಮಾಡಿದ್ದಾರೆ.

ಪೊಲೀಸ್ ಠಾಣೆಗೆ ಭೇಟಿ ನೀಡುವ ಸಾರ್ವಜನಿಕರು ಕಡ್ಡಾಯವಾಗಿ ಮಾಸ್ಕ್ ಹಾಗೂ ಹ್ಯಾಂಡ್ ಗ್ಲೌಸ್ ಧರಿಸಿಕೊಂಡು ಬರಬೇಕು. ಠಾಣೆಯ ಪ್ರವೇಶ ದ್ವಾರದಲ್ಲಿ ಹ್ಯಾಂಡ್ ಸ್ಯಾನಿಟೈಸರ್‌ನಿಂದ ಕೈ ಶುದ್ಧಗೊಳಿಸಿಕೊಂಡು ಒಳ ಬರಬೇಕು.

ಸಾರ್ವಜನಿಕರು ಠಾಣೆಯ ಒಳಗಡೆ ಗುಂಪಾಗಿ ಆಗಮಿಸಬಾರದು.  ದೂರುಗಳಿದ್ದಲ್ಲಿ ಪೊಲೀಸ್ ಹೆಲ್ಪ್ ಡೆಸ್ಕ್ ನ ಸಹಾಯ ಪಡೆಯಬಹುದು. ಈ ಸಂದರ್ಭದಲ್ಲಿ ಪೊಲೀಸರ ಜೊತೆ ಕಡ್ಡಾಯವಾಗಿ ಸಾಮಾಜಿಕ ಅಂತರ ಕಾಯ್ದುಕೊಳ್ಳುವಂತೆ ಸಲಹೆ ನೀಡಿದ್ದಾರೆ.


ವೆಬ್ದುನಿಯಾವನ್ನು ಓದಿ

ಸಂಬಂಧಿಸಿದ ಸುದ್ದಿ