2022-2023ರ ಅವಧಿಯ ವೇಳೆ ದೇಶದಲ್ಲಿ ಡಿಜಿಟಲ್ ಕರೆನ್ಸಿ ಪ್ರಾರಂಭಿಸುವ ಬಗ್ಗೆ ಸಂಸತ್ ಭವನದಲ್ಲಿ ವಿತ್ತ ಸಚಿವೆ ನಿರ್ಮಲಾ ಸೀತಾರಾಮನ್ ಘೋಷಿಸಿದ್ದಾರೆ.ಈ ಡಿಜಿಟಲ್ ಕರೆನ್ಸಿಯನ್ನು ಭಾರತೀಯ ರಿಸರ್ವ್ ಬ್ಯಾಂಕ್ ಬಿಡುಗಡೆ ಮಾಡಲಿದ್ದು, ಇದು ಬ್ಲಾಕ್ ಚೈನ್ ತಂತ್ರಜ್ಞಾನವನ್ನು ಒಳಗೊಂಡಿರುತ್ತದೆ ಎಂದು ತಿಳಿಸಿದರು.