ರಾಜ್ಯದಲ್ಲಿ ಏರೋಸ್ಪೇಸ್ ಹಾಗೂ ರಕ್ಷಣಾ ನೀತಿಯು ಜಾರಿಯಲ್ಲಿದ್ದು, ರಕ್ಷಣಾ ಹಾಗೂ ಏರೋಸ್ಪೇಸ್ ಕೈಗಾರಿಕೆಗಳನ್ನು ಅಭಿವೃದ್ಧಿಪಡಿಸಲು 45 ಸಾವಿರಕ್ಕೂ ಹೆಚ್ಚು ಯುವಕರನ್ನ ತೊಡಗಿಸಿಕೊಳ್ಳಲಾಗುವುದು ಎಂದರು.
ಇದೇ ವೇಳೆ ಕರ್ನಾಟಕದಲ್ಲಿ 14ನೇ ಏರೋ ಶೋ ಆಯೋಜಿಸಲು ಅವಕಾಶ ಮಾಡಿಕೊಟ್ಟಿರುವ ಪ್ರಧಾನಿಗಳು ಹಾಗೂ ರಕ್ಷಣಾ ಸಚಿವರಿಗೆ ಸಿಎಂ ಧನ್ಯವಾದ ಅರ್ಪಿಸಿದರು. ರಕ್ಷಣಾ ವಲಯದ ಶಕ್ತಿ ಹಾಗೂ ಸಾಮರ್ಥ್ಯ ವೃದ್ಧಿಗೆ ಕರ್ನಾಟಕ ತನ್ನ ಕೊಡುಗೆಯನ್ನು ನಿರಂತರವಾಗಿ ನೀಡಲಿದೆ ಎಂದು ಶ್ಲಾಘಿಸಿದರು.