ದಾವಣಗೆರೆಯಲ್ಲಿ ನಡೆದ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಕೇಂದ್ರ ಮಧ್ಯಮ ಕೈಗಾರಿಕಾ ಸಚಿವ ಜಿ.ಎಂ.ಸಿದ್ದೇಶ್ವರ, ರಾಜ್ಯಕ್ಕೆ ಹೆಚ್ಚಿನ ಅನುದಾನ ಬೇಕಿದ್ದರೆ ಕೇಂದ್ರ ಸರಕಾರದ ಗಮನಕ್ಕೆ ತರಲಿ. ಅನಗತ್ಯವಾಗಿ ಕೇಂದ್ರ ಸರಕಾರದ ವಿರುದ್ಧ ಹೇಳಿಕೆ ನೀಡುವುದನ್ನು ನಿಲ್ಲಿಸಿ ಎಂದು ರಾಜ್ಯ ಸರಕಾರಕ್ಕೆ ಕಿವಿಮಾತು ಹೇಳಿದ್ದಾರೆ.