ಉತ್ತರಾಖಂಡ್‌ನಲ್ಲಿ ರಾಷ್ಟ್ರಪತಿ ಆಡಳಿತ ವಜಾಗೊಳಿಸಿದ್ದ ಜಡ್ಜ್ ವರ್ಗಾವಣೆ

ಬುಧವಾರ, 4 ಮೇ 2016 (18:35 IST)
ಉತ್ತರಾಖಂಡ್‌ನಲ್ಲಿ ಕೇಂದ್ರ ಸರ್ಕಾರ ಹೇರಿದ್ದ ರಾಷ್ಟ್ರಪತಿ ಆಡಳಿತವನ್ನು ವಜಾಗಳಿಸಿದ್ದ ಹೈಕೋರ್ಟ್ ಮುಖ್ಯನ್ಯಾಯಾಧೀಶ ಕೆಎಂ ಜೋಸೆಫ್ ಅವರನ್ನು ವರ್ಗಾಯಿಸಲಾಗಿದೆ. ಅವರನ್ನು ಹೈದ್ರಾಬಾದ್‌ನಲ್ಲಿರುವ ಆಂಧ್ರಪ್ರದೇಶ ಹೈಕೋರ್ಟ್‍ನ ನ್ಯಾಯಾಧೀಶರಾಗಿ ನೇಮಿಸಲಾಗಿದೆ.

ಜುಲೈ 2014ರಲ್ಲಿ ಅವರು ಉತ್ತರಾಖಂಡ್‌ ಹೈಕೋರ್ಟ್ ಮುಖ್ಯ ನ್ಯಾಯಾಧೀಶರಾಗಿ ಅಧಿಕಾರ ಸ್ವೀಕರಿಸಿದ್ದರು.
 
ಆಂಧ್ರಪ್ರದೇಶದ ಕಾರ್ಯನಿರ್ವಾಹಕ ನ್ಯಾಯಾಧೀಶರಾಗಿದ್ದ ದಿಲೀಪ್ ಬಿ ಭೋಸಲೆ ಅವರನ್ನು ಮಧ್ಯಪ್ರದೇಶದ ಮುಖ್ಯನ್ಯಾಯಮೂರ್ತಿಯಾಗಿ ವರ್ಗಾಯಿಸಲಾಗಿದೆ.
 
ಉತ್ತರಾಖಂಡ್‍ನಲ್ಲಿ ರಾಷ್ಟ್ರಪತಿ ಆಡಳಿತವನ್ನು ವಜಾಗೊಳಿಸಿದ್ದ ನ್ಯಾಯಮೂರ್ತಿ.ಕೆ.ಎಂ. ಜೋಸೆಫ್  ಮಾಜಿ ಮುಖ್ಯಮಂತ್ರಿ ಹರೀಶ್ ರಾವತ್ ಅವರಿಗೆ ವಿಶ್ವಾಸ ಮತಯಾಚನೆಗೆ ಅವಕಾಶ ಕಲ್ಪಿಸಿಕೊಟ್ಟಿದ್ದರು.
 

ವೆಬ್ದುನಿಯಾವನ್ನು ಓದಿ