ಕೇಂದ್ರದ ಮಾಜಿ ಸಚಿವ ವಿ ಧನಂಜಯ ಕುಮಾರ್ ಆರೋಗ್ಯ ಗಂಭೀರ
ಕಿಡ್ನಿ ಸಮಸ್ಯೆಯಿಂದ ಬಳಲುತ್ತಿರುವ ಮಾಜಿ ಸಚಿವರನ್ನು ಬೆಂಗಳೂರಿನ ಬಿಜಿಎಸ್ ಆಸ್ಪತ್ರೆಗೆ ದಾಖಲಿಸಲಾಗಿದೆ. ಕಳೆದ ಐದು ದಿನಗಳಿಂದ ಅವರಿಗೆ ಬಿಜಿಎಸ್ ಆಸ್ಪತ್ರೆಯಲ್ಲಿ ಚಿಕಿತ್ಸೆ ಕೊಡಿಸಲಾಗುತ್ತಿದೆ.
ಇದೀಗ ಆರೋಗ್ಯ ಸ್ಥಿತಿ ಉಲ್ಬಣಿಸಿದ ಹಿನ್ನಲೆಯಲ್ಲಿ ಐಸಿಯುವಿಗೆ ಶಿಫ್ಟ್ ಮಾಡಲಾಗಿದೆ. ಬಿಜೆಪಿ ಸರ್ಕಾರದಲ್ಲಿ ಸಚಿವರಾಗಿ, ವಕ್ತಾರರಾಗಿ ಧನಂಜಯ ಕುಮಾರ್ ಕೆಲಸ ಮಾಡಿದ್ದರು. ಇತ್ತೀಚೆಗಷ್ಟೇ ಬಿಜೆಪಿ ತೊರೆದಿದ್ದರು.