ಕಂದಾಯ ಸಚಿವ ವಿ.ಶ್ರೀನಿವಾಸ್‌ಪ್ರಸಾದ್‌ ಬೆಂಬಲಿಗರಿಂದ ಭಾರಿ ಪ್ರತಿಭಟನೆ

ಶನಿವಾರ, 18 ಜೂನ್ 2016 (15:28 IST)
ಸಂಪುಟ ಪುನಾರಚನೆಯಲ್ಲಿ ಕಂದಾಯ ಸಚಿವ ವಿ.ಶ್ರೀನಿವಾಸ್‌ಪ್ರಸಾದ್‌ ಅವರನ್ನು ಕೈಬಿಡಲಾಗಿದೆ ಎನ್ನುವ ವರದಿಗಳ ಹಿನ್ನೆಲೆಯಲ್ಲಿ ಅವರ ಬೆಂಬಲಿಗರು ಭಾರಿ ಪ್ರತಿಭಟನೆ ಆರಂಭಿಸಿದ್ದಾರೆ.
 
ಯಾವುದೇ ಕಾರಣಕ್ಕೂ ವಿ.ಶ್ರೀನಿವಾಸ್‌ ಪ್ರಸಾದ್ ಅವರನ್ನು ಸಚಿವ ಸಂಪುಟದಿಂದ ಕೈಬಿಡಬಾರದು ಎಂದು ಸಚಿವರ ಬೆಂಬಲಿಗರು ಮುಖ್ಯಮಂತ್ರಿ ಸಿದ್ದರಾಮಯ್ಯನವರನ್ನು ಒತ್ತಾಯಿಸಿದ್ದಾರೆ.
 
ಸಂಪುಟ ಪುನಾರಚನೆಯಲ್ಲಿ 14 ಸಚಿವರನ್ನು ಕೈಬಿಡಲು ಕಾಂಗ್ರೆಸ್ ಪಕ್ಷದ ಅಧಿನಾಯಕಿ ಸೋನಿಯಾ ಗಾಂಧಿ ಮುಖ್ಯಮಂತ್ರಿ ಸಿದ್ದರಾಮಯ್ಯನವರಿಗೆ ಗ್ರೀನ್ ಸಿಗ್ನಲ್ ನೀಡಿದ್ದರು. ಅದರಂತೆ ಸಿಎಂ ಸಿದ್ದರಾಮಯ್ಯ, ವಿ.ಶ್ರೀನಿವಾಸ್ ಪ್ರಸಾದ್ ಸೇರಿದಂತೆ ಇತರ 13 ಸಚಿವರಿಗೆ ಕೊಕ್ ನೀಡಿದ್ದಾರೆ.
 
ಕಂದಾಯ ಸಚಿವ ವಿ.ಶ್ರೀನಿವಾಸ್‌ಪ್ರಸಾದ್‌ ಅವರನ್ನು ಸಂಪುಟದಿಂದ ಕೈಬಿಡಬಾರದು ಎಂದು ಸಂಸದರಾದ ಮುದ್ದೆಹನುಮೇಗೌಡ ಮತ್ತು ಚಂದ್ರಪ್ಪ ಸೇರಿದಂತೆ ಐವರು ಸಂಸದರು ಒತ್ತಡೃ ಹೇರಿದ್ದರು ಎನ್ನಲಾಗಿದೆ. 

ತಾಜಾ ಸುದ್ದಿಗಳಿಗಾಗಿ ವೆಬ್ ದುನಿಯಾ ಮೊಬೈಲ್ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ

ವೆಬ್ದುನಿಯಾವನ್ನು ಓದಿ