ಪಕ್ಷ ಸಂಘಟನೆಯಲ್ಲಿ ಹಲವಾರು ವರ್ಷಗಳಿಂದ ಸೋಮಣ್ಣ ಅವರು ತಮ್ಮನ್ನು ತಾವು ತೊಡಗಿಸಿಕೊಂಡಿದ್ದಾರೆ. ಪಕ್ಷದಲ್ಲಿರುವ ಸಣ್ಣಪುಟ್ಟ ಗೊಂದಲಗಳು ಸದ್ಯದಲ್ಲಿಯೇ ಬಗೆಹರಿಯಲಿದ್ದು, ಪಕ್ಷದಲ್ಲಿನ ಆಂತರಿಕ ಗೊಂದಲಗಳಿಂದ ಬಿಜೆಪಿ ಕಾರ್ಯಕರ್ತರಿಗಾಗಿರುವ ನೋವಿಗೆ ಕ್ಷಮೆಯಾಚಿಸಬೇಕು ಎಂದು ಬಿಜೆಪಿ ಪ್ರಧಾನ ಕಾರ್ಯದರ್ಶಿ ಅರವಿಂದ ಲಿಂಬಾವಳಿ ಕೇಳಿಕೊಂಡಿದ್ದಾರೆ.
ತಾವು ಕಾಂಗ್ರೆಸ್ ಪಕ್ಷ ಸೇರ್ಪಡೆಯಾಗುವ ಕುರಿತು ಮಾಧ್ಯಮಗಳಲ್ಲಿ ಸುದ್ದಿ ಬರುತ್ತಿದೆ. ಆದರೆ, ಈ ಸುದ್ದಿಗಳು ಸುಳ್ಳು ಎನ್ನಲು ಸಾಧ್ಯವಿಲ್ಲ ಎಂದು ಹೇಳುವ ಮೂಲಕ ಮಾಜಿ ಸಚಿವ ವಿ.ಸೋಮಣ್ಣ ಅವರು ನಿನ್ನೆ ಪರೋಕ್ಷವಾಗಿ ಕಾಂಗ್ರೆಸ್ ಪಕ್ಷ ಸೇರ್ಪಡೆಯಾಗುವ ಇಂಗಿತ ವ್ಯಕ್ತಪಡಿಸಿದ್ದರು.