ಕೃಷಿ ಇಲಾಖೆಯಲ್ಲಿ ಖಾಲಿ ಹುದ್ದೆ : ಕೆಪಿಎಸ್ ಸಿ ಮೂಲಕ ಭರ್ತಿ
ಮಂಗಳವಾರ, 10 ಮಾರ್ಚ್ 2020 (16:46 IST)
ರಾಜ್ಯದ ಕೃಷಿ ಇಲಾಖೆಯಲ್ಲಿ ವಿವಿಧ ಹುದ್ದೆಗಳು ಖಾಲಿ ಇದ್ದು, ಕೆಪಿಎಸ್ ಸಿ ಮೂಲಕ ಭರ್ತಿಗೆ ಕ್ರಮ ಕೈಗೊಳ್ಳಲಾಗುತ್ತಿದೆ.
ಕೃಷಿ ಇಲಾಖೆಯ ಗ್ರೂಪ್ -ಸಿ ವೃಂದದಲ್ಲಿ ಖಾಲಿ ಇರುವ 3640 ಹುದ್ದೆಗಳನ್ನು ಭರ್ತಿ ಮಾಡಲು ಕರ್ನಾಟಕ ಲೋಕಸೇವಾ ಆಯೋಗಕ್ಕೆ ಪತ್ರ ಬರೆಯಲಾಗಿದೆ ಎಂದು ಕೃಷಿ ಸಚಿವ ಬಿ.ಸಿ.ಪಾಟೀಲ್ ಹೇಳಿದ್ದಾರೆ.
2018-19 ನೇ ಸಾಲಿನಲ್ಲಿ ಗ್ರೂಪ್-ಎ ಮತ್ತು ಬಿ ವೃಂದದಲ್ಲಿ ಖಾಲಿ ಇರುವ ಹುದ್ದೆಗಳನ್ನು ನೇರ ನೇಮಕಾತಿ ಮೂಲಕ ಭರ್ತಿ ಮಾಡಲಾಗಿದೆ.
ಮುಂಬಡ್ತಿ ಕೋಟಾದಡಿ ಖಾಲಿ ಇರುವ ಹುದ್ದೆಗಳನ್ನು ಬಡ್ತಿ ಮೂಲಕ ಭರ್ತಿ ಮಾಡಲಾಗುವುದು. ನೇರ ನೇಮಕಾತಿ ಮೂಲಕ ಖಾಲಿ ಇರುವ ಹುದ್ದೆಗಳನ್ನು ಭರ್ತಿ ಮಾಡಲು ಕ್ರಮವಹಿಸಲಾಗುತ್ತಿದೆ ಎಂದಿದ್ದಾರೆ.
ಕೃಷಿ ಇಲಾಖೆಯಲ್ಲಿ 3640 ಹುದ್ದೆಗಳು ಖಾಲಿಯಿದ್ದು, ಯ 2018-19 ನೇ ಸಾಲಿನಲ್ಲಿ ಗ್ರೂಪ್ ಎ ಮತ್ತು ಬಿ ವೃಂದದಲ್ಲಿ ಖಾಲಿ ಇರುವ ಹುದ್ದೆಗಳನ್ನು ನೇರ ನೇಮಕಾತಿ ಮೂಲಕ ಭರ್ತಿ ಮಾಡಲಾಗಿದೆ. ಮುಂಬಡ್ತಿ ಕೋಟಾದಡಿ ಖಾಲಿ ಇರುವ ಹುದ್ದೆಗಳನ್ನು ಬಡ್ತಿ ಮೂಲಕ ಖಾಲಿ ಇರುವ ಹುದ್ದೆಗಳನ್ನು ಬಡ್ತಿ ಮೂಲಕ ಭರ್ತಿ ಮಾಡಲಾಗುವುದು ಎಂಬುದಾಗಿ ಸಚಿವ ಬಿ.ಸಿ. ಪಾಟೀಲ್ ಹೇಳಿದ್ದಾರೆ.