ಲೋಕಾಯುಕ್ತ ಸಿಬ್ಬಂದಿ ಕೊರತೆ ;ಖಾಲಿ ಹುದ್ದೆಗಳ ತುಂಬುವುದಕ್ಕೆ ಅಸ್ತು

ಗುರುವಾರ, 15 ಸೆಪ್ಟಂಬರ್ 2022 (16:17 IST)
ಹೈಕೋರ್ಟ್‌ನ ಆದೇಶದಂತೆ ಲೋಕಾಯುಕ್ತ ಸಂಸ್ಥೆಯ ಬಲವರ್ಧನೆಗೆ ಸಚಿವ ಸಂಪುಟ ಸಭೆ ತೀರ್ಮಾನಿಸಿದೆ. ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅಧ್ಯಕ್ಷತೆಯಲ್ಲಿ ಗುರುವಾರ ನಡೆದ ಸಚಿವ ಸಂಪುಟ ಸಭೆಯಲ್ಲಿ ಎಸಿಬಿಯನ್ನು ರದ್ದುಪಡಿಸಿ ಲೋಕಾಯುಕ್ತ ಸಂಸ್ಥೆಯನ್ನು ಬಲಪಡಿಸಬೇಕೆಂದು ಹೈಕೋರ್ಟ್‌ ಆದೇಶವನ್ನು ಯಥಾವತ್ತಾಗಿ ಪಾಲಿಸಲು ನಿರ್ಧರಿಸಲಾಯಿತು.
ಹೈಕೋರ್ಟ್‌ ತೀರ್ಪಿನ ವಿರುದ್ಧ ಸುಪ್ರೀಂಕೋರ್ಟ್‍ಗೆ ಮೇಲ್ಮನವಿ ಸಲ್ಲಿಸದಿರಲು ತೀರ್ಮಾನಿಸಲಾಗಿದೆ.
 
ಲೋಕಾಯುಕ್ತ ಸಂಸ್ಥೆಗೆ ಅಗತ್ಯವಿರುವ ಸಿಬ್ಬಂದಿ ನೇಮಕಾತಿ ವಿಚಾರಣೆಗೆ ಅನುಮತಿ ನೀಡಲು ನಿರ್ಧರಿಸಲಾಗಿದೆ. ಲೋಕಾಯುಕ್ತ ಸಂಸ್ಥೆಯಲ್ಲಿ ಒಟ್ಟು 10 ಸ್ಥಾನಗಳಿದ್ದವು. ಇದರಲ್ಲಿ 7 ಸ್ಥಾನಗಳು ಖಾಲಿ ಇತ್ತು. ಇವುಗಳನ್ನು ಹೊರಗುತ್ತಿಗೆ ಆಧಾರದ ಮೇಲೆ ನೇಮಿಸಲು ಸರ್ಕಾರ ತೀರ್ಮಾನಿಸಿದೆ ಇದರಲ್ಲಿ ಲೋಕಾಯುಕ್ತ ವಕೀಲರು ಸೇರಿದಂತೆ ಮತ್ತಿತರ ಸಿಬ್ಬಂದಿ ಇರಲಿದ್ದಾರೆ ಎಂದು ತಿಳಿದುಬಂದಿದೆ.

ವೆಬ್ದುನಿಯಾವನ್ನು ಓದಿ

ಸಂಬಂಧಿಸಿದ ಸುದ್ದಿ