ಕರ್ನಾಟಕದಲ್ಲಿ 15ರಿಂದ 18 ವರ್ಷದೊಳಗಿನ 31.75 ಲಕ್ಷ ಮಕ್ಕಳಿಗೆ ಲಸಿಕೆ ನೀಡುವ ಗುರಿಯನ್ನು ಹೊಂದಲಾಗಿದೆ. ಈ ಪೈಕಿ ಜನವರಿ 13ರ ಬೆಳಗ್ಗೆ 9.30ರ ವರೆಗೆ 17.81 ಲಕ್ಷ ಮಕ್ಕಳಿಗೆ ಲಸಿಕೆಯನ್ನು ನೀಡಲಾಗಿದೆ. ಶಾಲಾ-ಕಾಲೇಜುಗಳಲ್ಲಿ ಲಸಿಕಾಕರಣ ಅಭಿಯಾನ ಉತ್ತಮವಾಗಿ ನಡೆಯುತ್ತಿದೆ. ಮಕ್ಕಳು, ಪಾಲಕರು ಉತ್ತಮ ಸಹಕಾರ ನೀಡುತ್ತಿದ್ದಾರೆ. ಕೋವಿಡ್ ಸಾಂಕ್ರಾಮಿಕ ವಿರುದ್ಧ ಎಲ್ಲರೂ ಒಗ್ಗಟಾಗಿ ಹೋರಾಟ ನಡೆಸಬೇಕಿದೆ. ಇದರಲ್ಲಿ ಜಯ ಸಾಧಿಸುವ ಸಂಪೂರ್ಣ ವಿಶ್ವಾಸವಿದೆ ಎಂದು ಸಚಿವರು ಹೇಳಿದರು.
ಮಕ್ಕಳ ಲಸಿಕಾಕರಣದಲ್ಲಿ ಹಿಂದುಳಿದಿರುವ ಜಿಲ್ಲೆಗಳಲ್ಲಿ ವೇಗ ಹೆಚ್ಚಿಸಲು ಅಗತ್ಯ ಕ್ರಮ ಕೈಗೊಳ್ಳುವಂತೆ ಶಿಕ್ಷಣ ಇಲಾಖೆ ಅಧಿಕಾರಿಗಳಿಗೆ ಸೂಚಿಸಲಾಗಿದೆ. ಪ್ರೌಢಶಾಲೆ ಮತ್ತು ಕಾಲೇಜುಗಳಲ್ಲಿ ನಡೆಯುತ್ತಿರುವ ಲಸಿಕಾಕರಣದ ಬಳಿಕ ವಿವಿಧ ಕಾರಣಗಳಿಂದ ತರಗತಿಯಿಂದ ಹೊರಗಿರುವ ಮಕ್ಕಳಿಗೂ ಲಸಿಕೆ ನೀಡಲಾಗುತ್ತದೆ. ಶಿಕ್ಷಣ ಇಲಾಖೆ ಜೊತೆಗೆ ಆರೋಗ್ಯ ಇಲಾಖೆ ಹಾಗೂ ಇನ್ನಿತರ ಇಲಾಖೆಗಳ ಜೊತೆ ಸಂಯೋಜನೆಯೊಂದಿಗೆ
ಬಸವನಗುಡಿಯ ಸರ್ಕಾರಿ ಬಾಲಕಿಯರ ಪಿಯು ಕಾಲೇಜಿನಲ್ಲಿ ಕೊಠಡಿಗಳು, ಮೂಲಸೌಕರ್ಯ ಉತ್ತಮವಾಗಿದೆ. ಅಭಿವೃದ್ಧಿಗೆ ಸಾಕಷ್ಟು ಅವಕಾಶ ಇದೆ. ಆದರೆ, ವಿದ್ಯಾರ್ಥಿಗಳ ಸಂಖ್ಯೆ ಕಡಿಮೆ ಇದೆ. ಇಂತಹುದೇ ಪರಿಸ್ಥಿತಿ ರಾಜ್ಯದ ವಿವಿಧೆಡೆ ಇದೆ. ಹೀಗಾಗಿ, ಉತ್ತಮ ಸ್ಥಳಾವಕಾಶ ಮತ್ತು ಮೂಲಸೌಕರ್ಯ ಇರುವ ರಾಜ್ಯದ ಕಾಲೇಜುಗಳಲ್ಲಿ ವಿದ್ಯಾರ್ಥಿಗಳ ಸಂಖ್ಯೆ ಹೆಚ್ಚಿಸಿ, ಗೈರುಹಾಜರಿ ಕಡಿಮೆ ಮಾಡಲು ಕ್ರಮ ಕೈಗೊಳ್ಳಲಾಗುತ್ತದೆ ಎಂದು ಸಚಿವರು ತಿಳಿಸಿದರು.