ಇಂದಿನಿಂದ ರಾಜ್ಯಾದ್ಯಂತ ಶಾಲೆ ಕಾಲೇಜುಗಳಲ್ಲಿ ಲಸಿಕೆ
ರಾಜ್ಯದಲ್ಲಿ ಅಂದಾಜು 45 ಲಕ್ಷ ಮಕ್ಕಳು ಕೋವಿಡ್ ಲಸಿಕೆ ಪಡೆಯಲು ಅರ್ಹತೆ ಹೊಂದಿದ್ದು. ಬೆಂಗಳೂರಿನಲ್ಲಿ 7 ಲಕ್ಷ ಮಕ್ಕಳನ್ನ ಬಿಬಿಎಂಪಿ ಗುರುತಿಸಿದೆ.
ಶಾಲೆ ಕಾಲೇಜುಗಳಲ್ಲೇ ಮಕ್ಕಳಿಗೆ ವ್ಯಾಕ್ಸಿನ್ ನೀಡಲು ತೀರ್ಮಾನ ಮಾಡಲಾಗಿದೆ. ರಾಜ್ಯದಲ್ಲಿ ಪ್ರಸ್ತುತ 25 ಲಕ್ಷ ಡೋಸ್ ಕೋವ್ಯಾಕ್ಸಿನ್ ಲಸಿಕೆಯನ್ನು ಸಂಗ್ರಹಿಸಿಟ್ಟುಕೊಳ್ಳಲಾಗಿದ್ದು, ನಾಳೆಯೊಳಗೆ 10ರಿಂದ 12 ಲಕ್ಷ ಡೋಸ್ ಲಸಿಕೆ ಕೇಂದ್ರದಿಂದ ಬರುವ ನಿರೀಕ್ಷೆ ಇದೆ.