ಲಸಿಕೀಕರಣ ಮುಗಿಯುತ್ತಿದ್ದಂತೆ ಕಾಲೇಜು ಆರಂಭ ಕುರಿತು‌ ನಿರ್ಧಾರ: ಡಿಸಿಎಂ

ಶುಕ್ರವಾರ, 2 ಜುಲೈ 2021 (17:53 IST)
ಬೆಂಗಳೂರು: ರಾಜ್ಯದ ಎಲ್ಲ ವಿಶ್ವವಿದ್ಯಾಲಯಗಳ ವ್ಯಾಪ್ತಿಯಲ್ಲಿ ವಿದ್ಯಾರ್ಥಿಗಳು ಮತ್ತು ಶೈಕ್ಷಣಿಕ ಸಿಬ್ಬಂದಿಯ ಲಸಿಕೀಕರಣ ಕಾರ್ಯಕ್ರಮವನ್ನು ಚುರುಕುಗೊಳಿಸಬೇಕು. ಸಾಧ್ಯವಾದಷ್ಟು ಇದೇ 7ರೊಳಗೆ ಮುಗಿಸಲು ಆದ್ಯತೆ‌ ನೀಡಬೇಕು ಎಂದು ಉನ್ನತ ಶಿಕ್ಷಣ ಸಚಿವರೂ ಆದ ಉಪ ಮುಖ್ಯಮಂತ್ರಿ ಡಾ.ಸಿ.ಎನ್‌.ಅಶ್ವತ್ಥನಾರಾಯಣ ಎಲ್ಲ ವಿವಿಗಳ ಕುಲಪತಿಗಳಿಗೆ ನಿರ್ದೇಶನ ನೀಡಿದರು. 
 
ಕೋವಿಡ್ ‌ಲಸಿಕೆಯನ್ನು‌ ಹೆಚ್ಚು ತ್ವರಿತವಾಗಿ‌ ಕೊಡಿಸುವ ಸಂಬಂಧ ರಾಜ್ಯದ ಎಲ್ಲ ವಿಶ್ವವಿದ್ಯಾಲಯಗಳ ಕುಲಪತಿಗಳ ಜತೆ ಗುರುವಾರ ವಿಡಿಯೊ ಸಂವಾದ ನಡೆಸಿದ ನಂತರ ಅವರು‌ ಸುದ್ದಿಗಾರರ ಜತೆ ಮಾತನಾಡಿದರು. 
 
ರಾಜ್ಯದಲ್ಲಿ ಇನ್ನೆರಡು ತಿಂಗಳ ಒಳಗಾಗಿ ಒಟ್ಟು ಜನಸಂಖ್ಯೆಯಲ್ಲಿ ಶೇ.50ರಷ್ಟು ಜನರಿಗೆ ಲಸಿಕೆ ಲಭ್ಯವಾಗಲಿದೆ. ಈ ನಿಟ್ಟಿನಲ್ಲಿ ಭೌತಿಕ ತರಗತಿಗಳು ಆರಂಭಕ್ಕೆ ಮುನ್ನವೇ ಎಲ್ಲ ವಿದ್ಯಾರ್ಥಿಗಳಿಗೆ ಲಸಿಕೆ ನೀಡಬೇಕು ಹಾಗೂ ನಿತ್ಯವೂ ಪೂರೈಕ…

ವೆಬ್ದುನಿಯಾವನ್ನು ಓದಿ

ಸಂಬಂಧಿಸಿದ ಸುದ್ದಿ