10 ದಿನದಲ್ಲಿ ಎಲ್ಲ ಉನ್ನತ ಶಿಕ್ಷಣ ವಿದ್ಯಾರ್ಥಿಗಳಿಗೂ ಲಸಿಕೆ

ಗುರುವಾರ, 1 ಜುಲೈ 2021 (15:40 IST)
ಅಗಸ್ಟ್ ನಲ್ಲಿ 360 ಆಕ್ಸಿಜನ್ ಘಟಕಗಳ ಕಾರ್ಯಾರಂಭ; ಆಮ್ಲಜನಕ ಟ್ಯಾಂಕ್ ಗೆ ಜಾಗತಿಕ ಟೆಂಡರ್
ಆಮ್ಲಜನಕ- ಲಸಿಕೆ ವ್ಯವಸ್ಥೆ ಪರಿಶೀಲನೆ ನಡೆಸಿದ ಡಿಸಿಎಂ 
ಇನ್ನು 10 ದಿನಗಳಲ್ಲಿ 18 ವರ್ಷ ಮೇಲ್ಪಟ್ಟ ಎಲ್ಲ ಕಾಲೇಜು ವಿದ್ಯಾರ್ಥಿಗಳಿಗೂ ಕೋವಿಡ್ ಲಸಿಕೆ ನೀಡುವುದು ಹಾಗೂ ಅಗಸ್ಟ್ ಒಳಗೆ 360 ಘಟಕಗಳಿಂದ ಆಮ್ಲಜನಕ ಉತ್ಪಾದನೆ ಸೇರಿ 2,800 ಟನ್ ಆಕ್ಸಿಜನ್  ಸಂಗ್ರಹ ಸಾಮರ್ಥ್ಯವನ್ನು ಹೆಚ್ಚಿಸಲಾಗುವುದು ಎಂದು ರಾಜ್ಯ ಕೋವಿಡ್ ಕಾರ್ಯಪಡೆ ಅಧ್ಯಕ್ಷರಾದ ಉಪ ಮುಖ್ಯಮಂತ್ರಿ ಡಾ.ಸಿ.ಎನ್.ಅಶ್ವತ್ಥನಾರಾಯಣ ಹೇಳಿದರು. 
 
ಬೆಂಗಳೂರಿನಲ್ಲಿ ಮಂಗಳವಾರ ರಾಜ್ಯದಲ್ಲಿನ ಆಮ್ಲಜನಕ ವ್ಯವಸ್ಥೆ ಹಾಗೂ ಕಾಲೇಜು ವಿದ್ಯಾರ್ಥಿಗಳಿಗೆ ಲಸಿಕೆ ಹಾಕಿಸುವ ಸಂಬಂಧ ಆರೋಗ್ಯ, ವೈದ್ಯಕೀಯ ಶಿಕ್ಷಣ ಇಲಾಖೆ ಅಧಿಕಾರಿಗಳ ಸಭೆ ನಡೆಸಿದ ನಂತರ ಮಾಧ್ಯಮಗಳ ಜತೆ ಮಾತನಾಡಿದ ಡಿಸಿಎಂ, ವಿದ್ಯಾರ್ಥಿಗಳು ಈ ಅವಕಾಶವನ್ನು ಸದ್ಬಳಕೆ ಮಾಡಿಕೊಳ್ಳಬೇಕು ಎಂದು ಕೋರಿದರು. 
 
ಸೋಮವಾರ 94,000 ವಿದ್ಯಾರ್ಥಿಗಳಿಗೆ ಲಸಿಕೆ ಕೊಡಲಾಯಿ…
 

ವೆಬ್ದುನಿಯಾವನ್ನು ಓದಿ

ಸಂಬಂಧಿಸಿದ ಸುದ್ದಿ