ತಿರುಮಲ ತಿರುಪತಿ ತಿಮ್ಮಪ್ಪನ ದೇಗುಲದಲ್ಲಿ ಜನವರಿ 13 ರಂದು ವೈಕುಂಠ ಏಕಾದಶಿ. ಜನವರಿ 14 ರಂದು ವೈಕುಂಠ ದ್ವಾದಶಿ ಕೈಂಕರ್ಯಗಳು ನಡೆಯಲಿವೆ. ಈ ಸಂದರ್ಭದಲ್ಲಿ ಬುಧವಾರ ಮಧ್ಯರಾತ್ರಿ ನಂತರ ವೈಕುಂಠ ದ್ವಾರಗಳು ತೆರೆಯಲಿವೆ. ಧನುರ್ಮಾಸದ ಸಂದರ್ಭದಲ್ಲಿ, 12 ರಂದು ಮಧ್ಯರಾತ್ರಿ ನಂತರ ಏಕಾಂತದಲ್ಲಿ ಧನುರ್ಮಾಸ ವಿಧಿಗಳನ್ನು ಅರ್ಚಕರು ನಿರ್ವಹಿಸಲಿದ್ದಾರೆ. ನಂತರ 1.45 ಗಂಟೆಗೆ ಭಕ್ತಾದಿಗಳು ವೈಕುಂಠ ದ್ವಾರ ದರ್ಶನಕ್ಕೆ ಅನುಮತಿ ನೀಡಲಿದ್ದಾರೆ.
ತಿರುಮಲದ ಇತಿಹಾಸದಲ್ಲಿಯೇ ಕಳೆದ ವರ್ಷ ಮೊದಲ ಬಾರಿಗೆ ಹತ್ತು ದಿನಗಳ ಕಾಲ ವೈಕುಂಠ ದ್ವಾರ ತೆರೆದು ಭಕ್ತರಿಗೆ ದರ್ಶನ ಕಲ್ಪಿಸಿತ್ತು. ಈ ಬಾರಿಯೂ ಇದೇ 13 ರಿಂದ 22ರವರೆಗೆ ಭಕ್ತರ ದರ್ಶನಕ್ಕೆ ಅವಕಾಶ ಕಲ್ಪಿಸಲು ಟಿಟಿಡಿ ನಿರ್ಧರಿಸಿದೆ. ಈ ಹಿನ್ನಲೆಯಲ್ಲಿ ಟಿಟಿಡಿ ಈಗಾಗಲೇ ಭಕ್ತರಿಗೆ 300 ರೂಪಾಯಿ ವಿಶೇಷ ಪ್ರವೇಶ ದರ್ಶನ, ಟೈಮ್ ಸ್ಲಾಟ್ ಸರ್ವ ದರ್ಶನ ಟೋಕನ್, ಶ್ರೀವಾಣಿ ಬ್ರೇಕ್ ದರ್ಶನ ಟಿಕೆಟ್, ವರ್ಚುವಲ್ ಸೇವಾ ಟಿಕೆಟ್‌ಗಳನ್ನು ನಿಗದಿಪಡಿಸಿದೆ.
ಇಸ್ಕಾನ್ ದೇವಳಕ್ಕೆ ನಿರ್ಬಂಧ:
ಇನ್ನು ವೈಕುಂಠ ಏಕಾದಶಿಯಂದು ಬೆಂಗಳೂರಿನ ಇಸ್ಕಾನ್ ದೇವಸ್ಥಾನಕ್ಕೆ ಹೆಚ್ಚುತ್ತಿರುವ ಕೋವಿಡ್ ಹಿನ್ನೆಲೆಯಲ್ಲಿ ಪ್ರವೇಶ ನಿಷೇಧಿಸಲಾಗಿದೆ.