ವಾಲ್ಮೀಕಿ ನಿಗಮದ ಹಣದಲ್ಲೇ ಲೋಕಸಭೆ ಚುನಾವಣೆಗೆ ಕಾಂಗ್ರೆಸ್ ಪರ ಈ ಕೆಲಸ ಮಾಡಿದ್ದ ಆರೋಪಿಗಳು

Krishnaveni K

ಗುರುವಾರ, 18 ಜುಲೈ 2024 (10:04 IST)
ಬೆಂಗಳೂರು: ವಾಲ್ಮೀಕಿ ನಿಗಮದಲ್ಲಿ ನಡೆದಿರುವ ಕೋಟ್ಯಂತರ ರೂಪಾಯಿ ಅಕ್ರಮದ ಬಗ್ಗೆ ಈಗ ಒಂದೊಂದೇ ಬೆಚ್ಚಿಬೀಳಿಸುವ ಅಂಶಗಳು ಬೆಳಕಿಗೆ ಬರುತ್ತವೆ. ನಿಗಮದಿಂದ ಲಪಟಾಯಿಸಿದ ಹಣದಲ್ಲೇ ಕಾಂಗ್ರೆಸ್ ಪರ ಲೋಕಸಭೆ ಚುನಾವಣೆಯಲ್ಲಿ ಮದ್ಯ ಹಂಚಲು ಬಳಕೆ ಮಾಡಿದ್ದರು ಎನ್ನಲಾಗಿದೆ.

ವಾಲ್ಮೀಕಿ ನಿಗಮ ಹಗರಣದ ಬಗ್ಗೆ ಈಗ ಇಡಿ ಕೂಲಂಕುಷವಾಗಿ ತನಿಖೆ ನಡೆಸುತ್ತಿದೆ. ಮಾಜಿ ಸಚಿವ ನಾಗೇಂದ್ರರನ್ನು ಬಂಧಿಸಿ ವಿಚಾರಣೆ ನಡೆಸುತ್ತಿದ್ದಾರೆ. ಶಾಸಕ ಬಸನಗೌಡ ದದ್ದಲ್ ಅವರ ದಾಖಲೆಗಳನ್ನೂ ಪರಿಶೀಲಿಸುತ್ತಿದೆ. ಈ ವೇಳೆ ಅಕ್ರಮವಾಗಿ ಪಡೆದ ಹಣವನ್ನು ಎಲ್ಲಿ ಖರ್ಚು ಮಾಡಲಾಗಿದೆ ಎಂಬ ವಿವರ ಲಭ್ಯವಾಗಿದೆ.

ಈ ಬಗ್ಗೆ ಪತ್ರಿಕಾ ಪ್ರಕಟಣೆಯನ್ನು ಬಿಡುಗಡೆ ಮಾಡಿರುವ ಇಡಿ ಇತ್ತೀಚೆಗೆ ನಡೆದ ಲೋಕಸಭಾ ಚುನಾವಣೆ ವೇಳೆ ನಿಗಮದಿಂದ ಅಕ್ರಮವಾಗಿ ವರ್ಗಾವಣೆಯಾದ ಹಣವನ್ನು ಮದ್ಯ ಖರೀದಿಗೆ ಬಳಸಲಾಗಿದೆ. ಆಂಧ್ರಪ್ರದೇಶ, ತೆಲಂಗಾಣದಲ್ಲಿ ಚುನಾವಣೆ ಸಂದರ್ಭದಲ್ಲಿ ಈ ಹಣ ಬಳಕೆಯಾಗಿದೆ ಎಂಬ ವಿಚಾರವನ್ನು ಬಹಿರಂಗಪಡಿಸಿದೆ.

ಇದು ರಾಜ್ಯ ಸರ್ಕಾರಕ್ಕೆ ಮುಜುಗರವುಂಟು ಮಾಡಿದೆ. ಪರಿಶಿಷ್ಟ ಜಾತಿ ಮತ್ತು ವರ್ಗದವರ ಕಲ್ಯಾಣಕ್ಕಾಗಿ ಬಳಕೆಯಾಗಬೇಕಾದ ಹಣ ಒಂದು ಪಕ್ಷದ ಚುನಾವಣಾ ವೆಚ್ಚ ಭರಿಸಲು ಬಳಕೆಯಾಗಿದೆ ಎಂಬುದು ನಾಚಿಕೆಗೇಡಿನ ಸಂಗತಿಯಾಗಿದೆ. ಅಲ್ಲದೆ, ಹಗರಣದಿಂದ ಬಂದ ಹಣದಲ್ಲಿ ಐಷಾರಾಮಿ ಕಾರುಗಳನ್ನು ಖರೀದಿ ಮಾಡಲಾಗಿದೆ. ಇದೆಲ್ಲದಕ್ಕೂ ದಾಖಲೆ ಪತ್ತೆಯಾಗಿದೆ ಎಂದು ಇಡಿ ಖಚಿತಪಡಿಸಿದೆ.

ವೆಬ್ದುನಿಯಾವನ್ನು ಓದಿ

ಸಂಬಂಧಿಸಿದ ಸುದ್ದಿ