ಬೆಂಗಳೂರಿನಲ್ಲಿ ವರುಣನ ಅಬ್ಬರ, ಶಾಲಾ ಕಾಲೇಜುಗೆ ರಜೆ ಘೋಷಿಸಿದ ಜಿಲ್ಲಾಧಿಕಾರಿ
ಸರ್ಕಾರಿ ಪ್ರಾಥಮಿಕ ಶಾಲೆಗಳಿಗೆ ಅಕ್ಟೋಬರ್ 20 ರವರೆಗೆ ದಸರಾ ರಜೆ ಇದೆ. ಆದ್ರೆ ಖಾಸಗಿ ಶಾಲೆಗಳು ಶಾಲೆ ಆರಂಭ ಮಾಡಿವೆ. ಸೋಮವಾರದಿಂದಲೆ ಖಾಸಗಿ ಶಾಲೆಗಳು ಪುನರಾರಂಭವಾಗಿವೆ.
ಮಳೆ ಹಿನ್ನೆಲೆ ಮಕ್ಕಳಿಗೆ ಶಾಲೆಗೆ ಬರಲು ಕಷ್ಟವಾಗುವ ಕಾರಣ ರಾಜಧಾನಿಯ ಶಾಲೆಗಳಿಗೆ ರಜೆ ನೀಡಲು ಬೆಂಗಳೂರು ನಗರ ಜಿಲ್ಲಾಧಿಕಾರಿ ಜಗದೀಶ್ ಸೂಚನೆ ನೀಡಿದ್ದಾರೆ.