ವೀರಶೈವ, ಲಿಂಗಾಯತ ಎರಡೂ ಒಂದೇ– ಬಿಎಸ್‌ವೈ

ಬುಧವಾರ, 3 ಜನವರಿ 2018 (14:27 IST)
ವೀರಶೈವ, ಲಿಂಗಾಯತ ಎರಡೂ ಒಂದೇ ಎಂದು ಬಿಜೆಪಿ ರಾಜ್ಯಾಧ್ಯಕ್ಷ ಬಿ.ಎಸ್.ಯಡಿಯೂರಪ್ಪ ಸ್ಪಷ್ಟಪಡಿಸಿದ್ದಾರೆ.
ದಾವಣಗೆರೆಯಲ್ಲಿ ಮಾತನಾಡಿದ ಅವರು, ಪ್ರತ್ಯೇಕ ಲಿಂಗಾಯತ ಧರ್ಮಕ್ಕಾಗಿ ಹೋರಾಟದಿಂದ ಉಂಟಾಗಿರುವ ಲಿಂಗಾಯತ-ವೀರಶೈವ ಗೊಂದಲಗಳ ಬಗ್ಗೆ ಪ್ರತಿಕ್ರಿಯೆ ನೀಡಿದ್ದಾರೆ.
 
ಅಖಿಲ ಭಾರತ ವೀರಶೈವ ಮಹಾಸಭಾದ ಅಧ್ಯಕ್ಷ ಶಾಮನೂರು ಶಿವಶಂಕರಪ್ಪ ಅವರು ಲಿಂಗಾಯತ -ವೀರಶೈವ ಎರಡೂ ಒಂದೇ ಎಂದು ಸ್ಪಷ್ಟ ನಿಲುವು ಸ್ಪಷ್ಟ ಪಡಿಸಿದ್ದಾರೆ ಎಂದು ತಿಳಿಸಿದ್ದಾರೆ.
 
ತುಮಕೂರಿನ ಸಿದ್ಧಗಂಗಾ ಮಠದ ಶಿವಕುಮಾರ ಸ್ವಾಮೀಜಿ ಸೇರಿದಂತೆ ಇತರೆ ಸ್ವಾಮೀಜಿಗಳು ಕೂಡ ಸ್ಪಷ್ಟವಾಗಿ ಹೇಳಿದ್ದಾರೆ. ಸ್ವಾಮೀಜಿ ಹಾಗೂ ಶಾಮನೂರು ಶಿವಶಂಕರ ಅವರ ತೀರ್ಮಾನಕ್ಕೆ ನಾವು ಬದ್ಧರಾಗಿದ್ದೇವೆ ಎಂದಿದ್ದಾರೆ.
 
ಬಿಜೆಪಿ ಶಾಸಕರು ಹಾಗೂ ಸಂಸದರು ಎಲ್ಲರೂ ಒಂದೇ ತೀರ್ಮಾನಕ್ಕೆ ಬದ್ದರಾಗಿದ್ದೇವೆ. ಬಸವರಾಜ ಹೊರಟ್ಟಿ ಅವರು ಸ್ವಾರ್ಥಕ್ಕಾಗಿ ಹೋರಾಟ ಮಾಡುತ್ತಿದ್ದಾರೆ ಎಂದು ಆರೋಪಿಸಿದ್ದಾರೆ.
 
ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ ಮೊಬೈಲ್ ಆ್ಯಪ್ ಡೌನ್‍ಲೋಡ್ ಮಾಡಿಕೊಳ್ಳಿ. 

ವೆಬ್ದುನಿಯಾವನ್ನು ಓದಿ

ಸಂಬಂಧಿಸಿದ ಸುದ್ದಿ