ವೀರಶೈವ ಲಿಂಗಾಯುತ ಪ್ರತ್ಯೇಕ ಧರ್ಮ ಬೇಡ: ಸಚಿವ ಪಾಟೀಲ್

ಸೋಮವಾರ, 31 ಜುಲೈ 2017 (14:33 IST)
ವೀರಶೈವ ಲಿಂಗಾಯುತ ಪ್ರತ್ಯೇಕ ಧರ್ಮ ಬೇಡ ಎಂದು ಜಲಸಂಪನ್ಮೂಲ ಖಾತೆ ಸಚಿವ ಎಂ.ಬಿ.ಪಾಟೀಲ್ ಹೇಳಿದ್ದಾರೆ.
 
ಲಿಂಗಾಯುತವನ್ನಷ್ಟೆ ಪ್ರತ್ಯೇಕ ಧರ್ಮವಾಗಿ ಘೋಷಿಸಿ. ವೀರಶೈವ- ಲಿಂಗಾಯುತರಲ್ಲಿ ಪ್ರತ್ಯೇಕತೆಯಿದೆ. ಲಿಂಗಾಯುತ ಒಂದು ಸ್ವತಂತ್ರ ಅಸ್ತಿತ್ವವುಳ್ಳ ಧರ್ಮವಾಗಿದೆ ಎಂದು ತಿಳಿಸಿದ್ದಾರೆ.
 
ಅಖಿಲ ಭಾರತ ವೀರಶೈವ ಮಹಾಸಭಾ ಹಿಂದೆ ಮಾಡಿದ ಪ್ರಮಾದವನ್ನು ಸರಿಪಡಿಸಿಕೊಂಡು ಲಿಂಗಾಯುತ ಪ್ರತ್ಯೇಕ ಧರ್ಮವಾಗಿಸಲು ಬೆಂಬಲಿಸಬೇಕು ಎಂದು ಮಹಾಸಭಾದ ಅಧ್ಯಕ್ಷ ಶಾಮನೂರು ಶಿವಶಂಕರಪ್ಪ ಅವರಿಗೆ ಪತ್ರ ಬರೆದಿದ್ದಾಗಿ ಸಚಿವ ಎಂ.ಬಿ.ಪಾಟೀಲ್ ತಿಳಿಸಿದ್ದಾರೆ.
 
ಆದರೆ, ಸಚಿವ ಎಂ.ಬಿ.ಪಾಟೀಲ್‌ರಿಂದ ತಮಗೆ ಯಾವುದೇ ಪತ್ರ ಬಂದಿಲ್ಲವೆಂದು ಅಖಿಲಭಾರತ ವೀರಶೈವ ಮಹಾಸಭಾದ ಅಧ್ಯಕ್ಷ ಶಾಮನೂರು ಶಿವಶಂಕರಪ್ಪ ಸ್ಪಷ್ಟಪಡಿಸಿದ್ದಾರೆ.

ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ ಮೊಬೈಲ್ ಆ್ಯಪ್ ಡೌನ್‍ಲೋಡ್ ಮಾಡಿಕೊಳ್ಳಿ. 

ವೆಬ್ದುನಿಯಾವನ್ನು ಓದಿ