ಬೆ.6 ರಿಂದ 10 ರವರೆಗೆ ವಾಹನ ಸಂಚಾರಕ್ಕೆ ಅವಕಾಶ

ಮಂಗಳವಾರ, 11 ಮೇ 2021 (09:47 IST)
ಬೆಂಗಳೂರು: ಸಾರ್ವಜನಿಕರಿಂದ ತೀವ್ರ ಆಕ್ಷೇಪ ಕೇಳಿಬಂದ ಹಿನ್ನಲೆಯಲ್ಲಿ ಲಾಕ್ ಡೌನ್ ವೇಳೆ ಬೆಳಿಗ್ಗೆ 6 ರಿಂದ 10 ಗಂಟೆಯವರೆಗೆ ವಾಹನ ಸಂಚಾರಕ್ಕೆ ಅವಕಾಶ ಕೊಡಲಾಗಿದೆ.


ಈ ಮೊದಲು ವಾಹನಗಳಲ್ಲಿ ಸಂಚರಿಸುವಂತಿಲ್ಲ. ದಿನಸಿ, ಮತ್ತಿತರ ಅಗತ್ಯಗಳಿಗಾಗಿ ನಡೆದೇ ಹೋಗಬೇಕು ಎಂದು ನಿಯಮವಿತ್ತು. ಆದರೆ ಇದರಿಂದ ತೊಂದರೆಯಾಗುತ್ತಿದೆ ಎಂದು ಸಾಮಾಜಿಕ ಜಾಲತಾಣಗಳ ಮೂಲಕ ಸಾರ್ವಜನಿಕರು ತೀವ್ರ ಆಕ್ಷೇಪ ವ್ಯಕ್ತಪಡಿಸಿದ್ದರು.

ಇದರ ಬೆನ್ನಲ್ಲೇ ನಿಯಮಕ್ಕೆ ತಿದ್ದುಪಡಿ ತರಲಾಗಿದ್ದು, ಬೆಳಿಗ್ಗಿನ ನಾಲ್ಕು ಗಂಟೆ ಅವಧಿಯಲ್ಲಿ ವಾಹನ ಸಂಚಾರಕ್ಕೆ ಅವಕಾಶ ಮಾಡಿಕೊಡಲಾಗಿದೆ. ಆದರೆ ನಂತರ ಅನಗ್ಯವಾಗಿ ಓಡಾಡುವಂತಿಲ್ಲ.

ವೆಬ್ದುನಿಯಾವನ್ನು ಓದಿ

ಸಂಬಂಧಿಸಿದ ಸುದ್ದಿ