ವಿವಿಧ ಕಾರ್ಯಕ್ರಮಗಳಲ್ಲಿ ಭಾಗಿಯಾಗಲಿರುವ ಉಪರಾಷ್ಟ್ರಪತಿ ವೆಂಕಯ್ಯ
ಹುಬ್ಬಳ್ಳಿ: ಗದಗದ ನರಗುಂದಲ್ಲಿ ನಡೆಯಲಿರುವ ವಿವಿಧ ಕಾರ್ಯಕ್ರಮಗಳಲ್ಲಿ ಪಾಲ್ಗೊಳ್ಳಲು ಉಪರಾಷ್ಟ್ರಪತಿ ವೆಂಕಯ್ಯನಾಯ್ಡು ಹುಬ್ಬಳ್ಳಿ ವಿಮಾನ ನಿಲ್ದಾಣಕ್ಕೆ ಬಂದಿಳಿದರು.
ನರಗುಂದ ತಾಲೂಕು ಬಯಲು ಬಹಿರ್ದೆಸೆ ಮುಕ್ತ ತಾಲೂಕು ಎಂದು ಉಪರಾಷ್ಟ್ರಪತಿಗಳು ಘೋಷಣೆ ಮಾಡಲಿದ್ದಾರೆ. ಭಾರತೀಯ ವಾಯುಸೇನೆ ಮೂರು ಹೆಲಿಕಾಪ್ಟರ್, ಉಪರಾಷ್ಟ್ರಪತಿ ಭದ್ರತೆ ನಿಯೋಜನೆ ಮಾಡಲಾಗಿದೆ. ವಿಮಾನ ನಿಲ್ದಾಣಕ್ಕೆ ಬಂದಿಳಿದ ಉಪರಾಷ್ಟ್ರಪತಿಗಳಿಗೆ ಮೇಯರ್ ಡಿ.ಕೆ.ಚೌಹಾಣ್ ಹೂಗುಚ್ಛ ನೀಡಿ ಸ್ವಾಗತಿಸಿದರು. ಬಳಿಕ ಹೆಲಿಕಾಪ್ಟರ್ ಮೂಲಕ ನರಗುಂದಕ್ಕೆ ಪ್ರಯಾಣ ಬೆಳೆಸಿದರು.