ನಮ್ಮ ಮೆಟ್ರೋದಲ್ಲಿ ಹಿಂದಿ ಹೇರಿಕೆ ಸಮರ್ಥಿಸಿಕೊಂಡ ವೆಂಕಯ್ಯ ನಾಯ್ಡು

ಶನಿವಾರ, 24 ಜೂನ್ 2017 (12:08 IST)
ಬೆಂಗಳೂರು: ನಮ್ಮ ಮೆಟ್ರೋ ನಿಲ್ದಾಣಗಳಲ್ಲಿ ಹಿಂದಿ ಭಾಷೆಯ ನಾಮಫಲಕಗಳ ವಿರುದ್ಧ ಕನ್ನಡಿಗರು ಮಾಡುತ್ತಿರುವ ಹೋರಾಟಕ್ಕೆ ಕೇಂದ್ರ ಸಚಿವ ವೆಂಕಯ್ಯ ನಾಯ್ಡು ವಿರೋಧ ವ್ಯಕ್ತಪಡಿಸಿದ್ದಾರೆ.

 
‘ಹಿಂದಿ ನಮ್ಮ ರಾಷ್ಟ್ರ ಭಾಷೆ. ಅದನ್ನು ಬಿಟ್ಟು ನಡೆಯುವಂತೆಯೇ ಇಲ್ಲ’ ಎಂದು ಹಿಂದಿ ಹೇರಿಕೆಯನ್ನು ಸಚಿವರು ಸಮರ್ಥಿಸಿಕೊಂಡಿದ್ದಾರೆ. ನಾಮಫಲಕದಲ್ಲಿ ಹಿಂದಿ ಭಾಷೆ ಇರುವುದರ ವಿರುದ್ಧ ಕನ್ನಡ ಪರ ಹೋರಾಟಗಾರರು ಪ್ರತಿಭಟನೆ ನಡೆಸುತ್ತಿರುವ ಬೆನ್ನಲ್ಲೇ ಸಚಿವರ ಈ ಹೇಳಿಕೆ ಉರಿಯುವ ಬೆಂಕಿಗೆ ತುಪ್ಪ ಸುರಿದಂತಾಗಿದೆ.

ಎಲ್ಲಾ ಭಾಷೆಯೂ ಸಮಾನವೇ. ಯಾವುದೇ ಭಾಷೆಯನ್ನು ಹೇರಿಕೆ ಮಾಡುವಂತಿಲ್ಲ ಎಂದು ಈ ಮೊದಲು ಕೇಂದ್ರ ಸರ್ಕಾರವೇ ಹೇಳಿತ್ತು. ಆದರೆ ಸಚವರ ಹಿಂದಿ ಭಾಷೆ ನಮ್ಮ ರಾಷ್ಟ್ರ. ಅದನ್ನು ಬಿಟ್ಟು ಮುಂದೆ ಹೋಗುವ ಪ್ರಶ್ನೆಯೇ ಇಲ್ಲ ಎಂದು ಕಾರ್ಯಕ್ರಮವೊಂದರಲ್ಲಿ ಹೇಳಿರುವುದು ಮತ್ತಷ್ಟು ಸಂಘರ್ಷಕ್ಕೆ ದಾರಿಯಾಗುವ ಸಾಧ್ಯತೆಯಿದೆ.

ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ ಮೊಬೈಲ್ ಆ್ಯಪ್ ಡೌನ್‍ಲೋಡ್ ಮಾಡಿಕೊಳ್ಳಿ

ವೆಬ್ದುನಿಯಾವನ್ನು ಓದಿ