ಹೈಕೋರ್ಟ್‌ ಮುಖ್ಯ ನ್ಯಾಯಮೂರ್ತಿಯಾಗಿ ವಿಭು ಬಖ್ರು ಪ್ರಮಾಣ ವಚನ ಸ್ವೀಕಾರ

Sampriya

ಶನಿವಾರ, 19 ಜುಲೈ 2025 (14:57 IST)
Photo Credit X
ಬೆಂಗಳೂರು: ಕರ್ನಾಟಕ ಹೈಕೋರ್ಟ್‌ನ ಮುಖ್ಯ ನ್ಯಾಯಮೂರ್ತಿಯಾಗಿ ವಿಭು ಬಖ್ರು ಅವರು ಶನಿವಾರ ಪ್ರಮಾಣ ವಚನ ಸ್ವೀಕರಿಸಿದರು.

ರಾಜ್ಯಪಾಲ ತಾವರ್‌ಚಂದ್ ಗೆಹ್ಲೋಟ್ ಅವರು ರಾಜ್ಯಭವನದ ಗಾಜಿನ ಮನೆಯಲ್ಲಿ ನಡೆದ ಸಮಾರಂಭದಲ್ಲಿ ನೂತನ ಮುಖ್ಯ ನ್ಯಾಯಮೂರ್ತಿಯಾಗಿ ಪ್ರಮಾಣ ವಚನ ಬೋಧಿಸಿದರು.

59 ವರ್ಷದ ನ್ಯಾಯಮೂರ್ತಿ ಬಖ್ರು ಅವರು ಇದಕ್ಕೂ ಮುನ್ನ ದೆಹಲಿ ಹೈಕೋರ್ಟ್‌ನಲ್ಲಿ ನ್ಯಾಯಾಧೀಶರಾಗಿ ಸೇವೆ ಸಲ್ಲಿಸಿದ್ದರು. ಕರ್ನಾಟಕ ಹೈಕೋರ್ಟ್‌ನ ಮುಖ್ಯ ನ್ಯಾಯಮೂರ್ತಿಯಾಗಿ ಅವರನ್ನು ಬಡ್ತಿ ನೀಡಲಾಗಿದ್ದು, ಸುಪ್ರೀಂ ಕೋರ್ಟ್ ಕೊಲಿಜಿಯಂ ಕೇಂದ್ರ ಸರ್ಕಾರಕ್ಕೆ ಮಾಡಿದ ಶಿಫಾರಸುಗಳನ್ನು ಆಧರಿಸಿದೆ.

ಮುಖ್ಯಮಂತ್ರಿ ಸಿದ್ದರಾಮಯ್ಯ, ವಿಧಾನಪರಿಷತ್ತಿನ ಸಭಾಪತಿ ಬಸವರಾಜ ಹೊರಟ್ಟಿ, ಉಪ ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್, ಹೈಕೋರ್ಟ್‌ನ ಹಂಗಾಮಿ ಮುಖ್ಯ ನ್ಯಾಯಮೂರ್ತಿಗಳಾದ ವಿ.ಕಾಮೇಶ್ವರ ರಾವ್, ‌ಸಚಿವರಾದ ಹೆಚ್.ಕೆ.ಪಾಟೀಲ್, ಬಿ.ಎಸ್.ಸುರೇಶ್ (ಬೈರತಿ) ಇತರರು ಇದ್ದರು.

ವೆಬ್ದುನಿಯಾವನ್ನು ಓದಿ

ಸಂಬಂಧಿಸಿದ ಸುದ್ದಿ