ಡಿಕೆಶಿ ಬಂಧನದ ಹಿನ್ನಲೆ ಹಿಂಸಾತ್ಮಕ ಪ್ರತಿಭಟನೆ ನಡೆಸಿದವರು ನಮ್ಮವರಲ್ಲ- ಸಿದ್ದರಾಮಯ್ಯ ಸ್ಪಷ್ಟನೆ
ಗುರುವಾರ, 5 ಸೆಪ್ಟಂಬರ್ 2019 (12:00 IST)
ಹುಬ್ಬಳ್ಳಿ : ಮಾಜಿ ಸಚಿವ ಡಿ.ಕೆ.ಶಿವಕುಮಾರ್ ಬಂಧನದ ಹಿನ್ನಲೆಯಲ್ಲಿ ಕಾಂಗ್ರೆಸ್ ಕಾರ್ಯಕರ್ತರು ತುಂಬಾ ಹಿಂಸಾತ್ಮಕ ಪ್ರತಿಭಟನೆ ನಡೆಸುತ್ತಿದ್ದಾರೆ.
ಈ ಬಗ್ಗೆ ಮಾಜಿ ಸಿಎಂ ಸಿದ್ದರಾಮಯ್ಯ, ಡಿಕೆಶಿ ಬಂಧನದ ಬಳಿಕ ನಡೆದ ಹಿಂಸಾತ್ಮಕ ಪ್ರತಿಭಟನೆ ಹಾಗೂ ಬಸ್ ಗಳಿಗೆ ಕಲ್ಲು ಹೊಡೆದವರು, ಬೆಂಕಿ ಹಚ್ಚಿದವರು ಕಾಂಗ್ರೆಸ್ ಕಾರ್ಯಕರ್ತರಲ್ಲ, ನಮ್ಮವರು ನಡೆಸುತ್ತಿದ್ದ ಶಾಂತಿಯುತ ಪ್ರತಿಭಟನೆ ನಡೆಸಲು ಹೇಳಿದ್ದೇವೆ. ಆದರೆ ನಮ್ಮವರ ನಡುವೆ ಕೆಲವು ಕಿಡಿಗೇಡಿಗಳು ಸೇರಿಕೊಂಡು ಹೀಗೆ ಮಾಡಿದ್ದಾರೆ ಎಂದು ಸ್ಪಷ್ಟನೆ ನೀಡಿದ್ದಾರೆ.
ಹಾಗೇ ರಾಜ್ಯದ ಪ್ರವಾಹ ಪರಿಸ್ಥಿತಿಯ ಬಗ್ಗೆ ಮಾತನಾಡಿದ ಅವರು, ರಾಜ್ಯದಲ್ಲಿ ಉಂಟಾಗಿರುವ ನೆರೆ ಪರಿಹಾರ ನೀಡಲು ಸರ್ಕಾರ ಸಂಪೂರ್ಣ ವಿಫಲವಾಗಿದೆ. ಗಂಜಿ ಕೇಂದ್ರಗಳನ್ನು ಈಗಾಗಲೇ ಮುಚ್ಚಲಾಗಿದೆ. ಬೆಳೆ ಪರಿಹಾರ ಹಾಗೂ ಮನೆ ಪರಿಹಾರ ಸಂತ್ರಸ್ತರಿಗೆ ತಲುಪುತ್ತಿಲ್ಲ ಎಂದು ಕಿಡಿಕಾರಿದ್ದಾರೆ.