ವಿಡಿಯೋ ಪ್ರಕರಣ: ಎಚ್ ಡಿ ರೇವಣ್ಣ ಭವಿಷ್ಯ ಇಂದು ತೀರ್ಮಾನ

Krishnaveni K

ಶನಿವಾರ, 4 ಮೇ 2024 (10:02 IST)
ಬೆಂಗಳೂರು: ಅಶ್ಲೀಲ ವಿಡಿಯೋ ಪ್ರಕರಣದಲ್ಲಿ ಪುತ್ರ ಪ್ರಜ್ವಲ್ ರೇವಣ್ಣ ಜೊತೆಗೆ ಶಾಸಕ ಎಚ್ ಡಿ ರೇವಣ್ಣ ಕೂಡಾ ಆರೋಪಿಯಾಗಿದ್ದಾರೆ.  ಈ ನಡುವೆ ರೇವಣ್ಣ ಸಲ್ಲಿಸಿದ್ದ ನಿರೀಕ್ಷಣಾ ಜಾಮೀನು ಅರ್ಜಿ ಇಂದು ವಿಚಾರಣೆಗೆ ಬರಲಿದೆ.

ಪ್ರಜ್ವಲ್ ರೇವಣ್ಣ ಸದ್ಯಕ್ಕೆ ವಿದೇಶದಲ್ಲಿದ್ದುಕೊಂಡೇ ವಕೀಲರ ಜೊತೆ ಮಾತುಕತೆ ನಡೆಸುತ್ತಿದ್ದಾರೆ. ವಕೀಲರ ಸಲಹೆಯಂತೇ ರೇವಣ್ಣ ಮೇ 10 ರೊಳಗಾಗಿ ವಿಚಾರಣೆಗೆ ಹಾಜರಾಗುವುದಾಗಿ ಎಸ್ಐಟಿಗೆ ತಿಳಿಸಿದ್ದಾರೆ. ಈಗಾಗಲೇ ಎಸ್ಐಟಿ ತನಿಖೆಗೆ ಹಾಜರಾಗುವಂತೆ ಅವರಿಗೆ ನೋಟಿಸ್ ನೀಡಿತ್ತು.

ಇದೇ ಪ್ರಕರಣದಲ್ಲಿ ಎಚ್ ಡಿ ರೇವಣ್ಣ ಹೆಸರೂ ಕೇಳಿಬಂದಿತ್ತು. ಆದರೆ ಅವರ ವಿರುದ್ಧ ದಾಖಲಾದ ಪ್ರಕರಣಗಳು ಅಷ್ಟು ಗಂಭೀರವಲ್ಲದ ಕಾರಣ ಅವರು ನಿರೀಕ್ಷಣಾ ಜಾಮೀನು ಅರ್ಜಿಯನ್ನು ಹಿಂಪಡೆದಿದ್ದರು. ಆದರೆ ರೇವಣ್ಣ ವಿರುದ್ಧ ಮಹಿಳೆಯೊರಬ್ಬರನ್ನು ಅಪಹರಿಸಿದ ಪ್ರಕರಣ ದಾಖಲಾಗಿದೆ.

ಈ ಪ್ರಕರಣದಲ್ಲಿ ಎರಡನೇ ಆರೋಪಿಯಾಗಿದ್ದ ಸತೀಶ್ ಎಂಬಾತನನ್ನು ಪೊಲೀಸರು ಈಗಾಗಲೇ ಬಂಧಿಸಿದ್ದಾರೆ. ಸತೀಶ್ ಗೆ ಮಹಿಳೆಯನ್ನು ಅಪಹರಿಸಲು ರೇವಣ್ಣ ಸೂಚಿಸಿದ್ದರು ಎಂದು ಆರೋಪಿಸಲಾಗಿದೆ. ಈ ಸಂಬಂಧ ರೇವಣ್ಣ ಬಂಧನ ಭೀತಿ ಎದುರಿಸುತ್ತಿದ್ದು, ನಿರೀಕ್ಷಣಾ ಜಾಮೀನು ಅರ್ಜಿ ಸಲ್ಲಿಸಿದ್ದಾರೆ. ಆ ಅರ್ಜಿಯ ತೀರ್ಮಾನ ಇಂದು ನಡೆಯಲಿದೆ. ಒಂದು ವೇಳೆ ನಿರೀಕ್ಷಣಾ ಜಾಮೀನು ಸಿಕ್ಕರೆ ರೇವಣ್ಣ ಇಂದೇ ವಿಚಾರಣೆಗೆ ಹಾಜರಾಗಲಿದ್ದಾರೆ. ಸದ್ಯಕ್ಕೆ ಅವರೀಗ ಬೆಂಗಳೂರಿನಲ್ಲಿ ಅಜ್ಞಾತ ಸ್ಥಳದಲ್ಲಿದ್ದುಕೊಂಡು ಕಾನೂನು ಹೋರಾಟ ನಡೆಸುತ್ತಿದ್ದಾರೆ.

ವೆಬ್ದುನಿಯಾವನ್ನು ಓದಿ

ಸಂಬಂಧಿಸಿದ ಸುದ್ದಿ