ನಿರ್ಮಲಾ ಸೀತಾರಾಮನ್ ರಾಜ್ಯಗಳ ಮುಖ್ಯಮಂತ್ರಿ ಗಳೊಂದಿಗೆ ನಡೆಸಿದ ವಿಡಿಯೋ ಸಂವಾದ

ಸೋಮವಾರ, 15 ನವೆಂಬರ್ 2021 (19:18 IST)
ಕೇಂದ್ರ ಹಣಕಾಸು ಸಚಿವರಾದ ಶ್ರೀಮತಿ ನಿರ್ಮಲಾ ಸೀತಾರಾಮನ್ ಅವರು ಇಂದು ಎಲ್ಲಾ ರಾಜ್ಯಗಳ ಮುಖ್ಯಮಂತ್ರಿಗಳೊಂದಿಗೆ ನಡೆಸಿದ ವಿಡಿಯೋ ಸಂವಾದದಲ್ಲಿ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಭಾಗವಹಿಸಿದರು. ರಾಜ್ಯ ಸರ್ಕಾರದ ಮುಖ್ಯ ಕಾರ್ಯದರ್ಶಿ ಪಿ. ರವಿಕುಮಾರ್, ಆರ್ಥಿಕ ಇಲಾಖೆ ಅಪರ ಮುಖ್ಯ ಕಾರ್ಯದರ್ಶಿ ಐ.ಎಸ್ ಎನ್. ಪ್ರಸಾದ್, ಮುಖ್ಯಮಂತ್ರಿಯವರ ಪ್ರಧಾನ ಕಾರ್ಯದರ್ಶಿ ಎನ್. ಮಂಜುನಾಥ್ ಪ್ರಸಾದ್, ಗೃಹ ಮತ್ತು ಲೋಕೋಪಯೋಗಿ ಇಲಾಖೆ ಅಪರ ಮುಖ್ಯ ಕಾರ್ಯದರ್ಶಿ ಡಾ. ರಜನೀಶ್ ಗೋಯಲ್, ವಾಣಿಜ್ಯ ಮತ್ತು ಕೈಗಾರಿಕಾ ಇಲಾಖೆ ಅಪರ ಮುಖ್ಯ ಕಾರ್ಯದರ್ಶಿ ಡಾ. ಇ.ವಿ. ರಮಣ ರೆಡ್ಡಿ ಹಾಗೂ ಮೂಲಸೌಕರ್ಯ ಅಭಿವೃದ್ಧಿ ಇಲಾಖೆ ಅಪರ ಮುಖ್ಯ ಕಾರ್ಯದರ್ಶಿ ಬಿ.ಹೆಚ್. ಅನಿಲ್ ಕುಮಾರ್ ಮೊದಲಾದವರು.

ವೆಬ್ದುನಿಯಾವನ್ನು ಓದಿ

ಸಂಬಂಧಿಸಿದ ಸುದ್ದಿ