ವಿದ್ವತ್ ಹಲ್ಲೆ ಪ್ರಕರಣ: ಮೊಹಮ್ಮದ್ ನಲಪಾಡ್ ಪ್ರಕರಣ ಎಲ್ಲಿವರೆಗೆ ಬಂತು?
ಗುರುವಾರ, 10 ಮೇ 2018 (10:16 IST)
ಬೆಂಗಳೂರು: ವಿದ್ವತ್ ಹಲ್ಲೆ ಪ್ರಕರಣದಲ್ಲಿ ಜೈಲು ಪಾಲಾಗಿರುವ ಶಾಸಕ ಹ್ಯಾರಿಸ್ ಪುತ್ರ ಮೊಹಮ್ಮದ್ ನಲಪಾಡ್ ಮತ್ತು ಸ್ನೇಹಿತರ ವಿರುದ್ಧ ಸಿಸಿಬಿ ಪೊಲೀಸರು ಚಾರ್ಜ್ ಶೀಟ್ ಸಲ್ಲಿಸಿದರು.
ಫೆಬ್ರವರಿ 17 ರಂದು ಯುಬಿ ಸಿಟಿಯ ಫರ್ಜಿ ಕೆಫೆಯಲ್ಲಿ ಉದ್ಯಮಿ ವಿದ್ವತ್ ಮೇಲೆ ಶಾಸಕ ಹ್ಯಾರಿಸ್ ಪುತ್ರ ಮೊಹಮ್ಮದ್ ನಲಪಾಡ್ ಮತ್ತು ಸ್ನೇಹಿತರ ಗ್ಯಾಂಗ್ ಮಾರಣಾಂತಿಕವಾಗಿ ಹಲ್ಲೆ ನಡೆಸಿತ್ತು. ಈ ಸಂಬಂಧ ಶಾಸಕರ ಪುತ್ರ ಪರಪ್ಪನ ಅಗ್ರಹಾರ ಜೈಲಿನಲ್ಲಿ ಕಳೆಯುತ್ತಿದ್ದಾರೆ.
ಇದೀಗ ಒಂದನೇ ಎಸಿಎಂಎಂ ನ್ಯಾಯಾಲಯಕ್ಕೆ ಸಿಸಿಬಿ ಪೊಲೀಸರು 400 ಪುಟಗಳ ಚಾರ್ಜ್ ಶೀಟ್ ಸಲ್ಲಿಸಿದ್ದಾರೆ. ವಿಚಾರಣೆ ವೇಳೆ ಸಿಸಿಬಿ ಪೊಲೀಸರು, ನಲಪಾಡ್, ವಿದ್ವತ್ ಅಲ್ಲದೆ, ಡಾ.ರಾಜ್ ಮೊಮ್ಮಗ ಗುರು ರಾಜ್ ಕುಮಾರ್ ಸೇರಿದಂತೆ ಹಲವರ ಹೇಳಿಕೆ ದಾಖಲಿಸಿದ್ದರು.
ತಾಜಾ ಸುದ್ದಿಗಳನ್ನು ಓದಲು ವೆಬ್ ದುನಿಯಾ ಮೊಬೈಲ್ ಆಪ್ ಡೌನ್ ಲೋಡ್ ಮಾಡಿಕೊಳ್ಳಿ.