ಅಬ್ಬಿ ಜಲಪಾತ ವೀಕ್ಷಣೆಗೆ ಅವಕಾಶ

ಶುಕ್ರವಾರ, 28 ಸೆಪ್ಟಂಬರ್ 2018 (15:09 IST)
ಪ್ರಕೃತಿ ಸೌಂದರ್ಯದ ನೆಲೆ ಬೀಡಾಗಿದ್ದ ಕೊಡಗು ಜಿಲ್ಲೆಯಲ್ಲಿ ಪ್ರಕೃತಿ ಮುನಿಸಿಕೊಂಡ ಪರಿಣಾಮ ಜಲ ಪ್ರಳಯವೇ ಉಂಟಾಗಿತ್ತು. ಇದರಿಂದ ಸಾಕಷ್ಟು ಆಸ್ತಿ ಪಾಸ್ತಿ ನಷ್ಟ ಉಂಟಾಗಿ ರಸ್ತೆ ಸಂಪರ್ಕಗಳು ಸಂಪರ್ಕ ಕಡಿತಗೊಂಡಿದ್ದವು. ಮುನ್ನೆಚ್ಚರಿಕೆ ಕ್ರಮವಾಗಿ ಒಂದು ತಿಂಗಳ ಕಾಲ ಜಿಲ್ಲಾಡಳಿತ ಪ್ರವಾಸಿಗರಿಗೆ ನಿರ್ಬಂಧ ಹೇರಿತ್ತು. ಅಧಿಕಾರಿಗಳ ಶ್ರಮದಿಂದ ತಾತ್ಕಾಲಿಕ ಸಂಪರ್ಕಗಳ ಕಾಮಗಾರಿ ಪೂರ್ಣಗೊಂಡಿದ್ದು, ಇದೀಗ ಪ್ರೇಕ್ಷಣೀಯ ಸ್ಥಳಗಳನ್ನು ವೀಕ್ಷಿಸಲು ಪ್ರವಾಸಿಗರಿಗೆ ಜಿಲ್ಲಾಡಳಿತ ಅವಕಾಶ  ಕಲ್ಪಿಸಿದೆ.

ಕೊಡಗು ಜಿಲ್ಲೆಗೆ ಹೆಚ್ಚಿನ ಸಂಖ್ಯೆಯಲ್ಲಿ ಪ್ರವಾಸಿಗರು ಜಿಲ್ಲೆಗೆ ಆಗಮಿಸುತ್ತಿದ್ದಾರೆ. ಮಡಿಕೇರಿ ತಾಲೂಕಿನ ಅಬ್ಬಿ ಜಲಪಾತ, ಮಾಂದಲ್‍ಪಟ್ಟಿ ಮತ್ತು ತಡಿಯಂಡಮೋಳ್ ಪ್ರವಾಸಿ ತಾಣಗಳಿಗಳತ್ತ ಭೇಟಿ ನೀಡುತ್ತಿದ್ದಾರೆ. ಆ ಮೂಲಕ ಪ್ರಕೃತಿ ಸೌಂದರ್ಯವನ್ನು ವೀಕ್ಷಣೆ ಮಾಡುತ್ತಿದ್ದಾರೆ.  

ಲಘು ವಾಹನ ಸಂಚಾರ ಯೋಗ್ಯ ರಸ್ತೆಯನ್ನು ನಿರ್ಮಿಸಲಾಗಿದೆ. ಆದುದರಿಂದ ಅಬ್ಬಿ ಜಲಪಾತ ವೀಕ್ಷಣೆಗೆ ಸಾರ್ವಜನಿಕರು ಹಾಗೂ ಪ್ರವಾಸಿಗರು ಲಘು ವಾಹನಗಳ ಮೂಲಕ ತೆರಳಬಹುದು. ಪ್ರವಾಸಿಗರು ಜಿಲ್ಲಾಡಳಿತ ನೀಡುವ ಸೂಚನೆಗಳನ್ನು ಪಾಲಿಸುವ ಮೂಲಕ ಸಹಕರಿಸಬೇಕಾಗಿ ಜಿಲ್ಲಾಧಿಕಾರಿ ಪಿ.ಐ.ಶ್ರೀವಿದ್ಯಾ ತಿಳಿಸಿದ್ದಾರೆ.



 

ವೆಬ್ದುನಿಯಾವನ್ನು ಓದಿ

ಸಂಬಂಧಿಸಿದ ಸುದ್ದಿ