ವಿಜಯಪುರ: ಗಣೇಶನ ಮೂರ್ತಿಯ ಪ್ರೊಟೆಕ್ಷನ್ ಗ್ಲಾಸ್ ಪುಡಿ ಪುಡಿ, ಭುಗಿಲೆದ್ದ ಆಕ್ರೋಶ

Sampriya

ಗುರುವಾರ, 3 ಅಕ್ಟೋಬರ್ 2024 (18:23 IST)
Photo Courtesy X
ವಿಜಯಪುರ: ನಗರದ ಸಿದ್ದೇಶ್ವರ ದೇವಸ್ಥಾನ ಬಳಿಯಿರುವ ಗಣಪತಿ ಚೌಕ್‌ನಲ್ಲಿ ಪ್ರತಿಷ್ಟಾಪಿಸಿರುವ ಚತುರ್ಮುಖ ಗರ್ಣಪನ ಮೂರ್ತಿಗೆ ದುಷ್ಕರ್ಮಿಗಳು ಕಲ್ಲು ಎಸೆದಿರುವ ಘಟನೆ ಬೆಳಕಿಗೆ ಬಂದಿದೆ.

ಕಲ್ಲು ಎಸೆದಿರುವ ಪರಿಣಾಮ ಗಣಪತಿಯ ಮೂರ್ತಿಯ ಸುತ್ತಲೂ ಹಾಕಿರುವ ಪ್ರೊಟೆಕ್ಷನ್ ಗ್ಲಾಸ್ ಪುಡಿ ಪುಡಿಯಾಗಿದೆ.  ಈ ಸುದ್ದಿ ತಿಳಿಯುತ್ತಿದ್ದಂತೆ ಸ್ಥಳಕ್ಕೆ ಆಗಮಿಸಿದ ಹಿಂದೂ ಪರ ಸಂಘಟನೆಗಳ ಕಾರ್ಯಕರ್ತರು, ಬಿಜೆಪಿ ಕಾರ್ಯಕರ್ತರು ತಪ್ಪಿತಸ್ಥರ ವಿರುದ್ಧ ಕಠಿಣ ಕ್ರಮಕ್ಕೆ ಒತ್ತಾಯ ಮಾಡಿದ್ದಾರೆ. ಸದ್ಯ ಬಿಗುವಿನ ವಾತಾವರಣ ಸೃಷ್ಟಿಯಾಗಿದೆ.

ನಿನ್ನೆ ತಡರಾತ್ರಿ ಕಿಡಿಗೇಡಿಗಳು ಈ ಕುಕೃತ್ಯ ಮಾಡಿದ್ದಾರೆಂದು ಬಿಜೆಪಿ ಕಾರ್ಯಕರ್ತರು ಆರೋಪಿಸಿದ್ದಾರೆ. ಈಚೆಗೆ ಗಣೇಶ ಚತುರ್ಥಿಯನ್ನು ಅದ್ಧೂರಿಯಾಗಿ ಆಚರಣೆ ಮಾಡಲಾಯಿತು. ಅದನ್ನು ಸಹಿಸಲಾರದೆ ಇದೀಗ ದಸರಾ ಹಬ್ಬಕ್ಕೆ ಭಗ್ನ ಮಾಡುವ ಯತ್ನ ಮಾಡಿದ್ದಾರೆ. ಪೊಲೀಸರು ಈ ನಿಟ್ಟಿನಲ್ಲಿ ತನಿಖೆ ನಡೆಸಿ ತಪ್ಪಿತಸ್ಥರನ್ನು ಬಂಧಿಸಿ ಕಾನೂನು ಕ್ರಮ ತೆಗೆದುಕೊಳ್ಳಬೇಕೆಂದು ಬಿಜೆಪಿ ಕಾರ್ಯಕರ್ತರು ಒತ್ತಾಯಿಸಿದ್ದಾರೆ.

ಗಣಪತಿ ಚೌಕ್​ನಲ್ಲಿ ಗಣಪನ ಮೂರ್ತಿಗೆ ಕಲ್ಲು ತೂರಿ ಹಾನಿ ಮಾಡಿದ್ದ ವಿಚಾರ ತಿಳಿಯುತ್ತಿದ್ದಂತೆ ಅಪರ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಶಂಕರ ಮಾರಿಹಾಳ, ಗಾಂಧಿಚೌಕ್ ಪೊಲೀಸ್ ಠಾಣೆಯ ಇನ್ಸಪೆಕ್ಟರ್ ಪ್ರದೀಪ್ ತಳಕೇರಿ ಹಾಗೂ ಇತರೆ ಸಿಬ್ಬಂದಿ ಆಗಮಿಸಿ ಪರಿಶೀಲನೆ ಮಾಡಿದರು. ಸುತ್ತಮುತ್ತಲ ಸಿಸಿ ಕ್ಯಾಮೆರಾಗಳ ಫೂಟೇಜ್ ಸಂಗ್ರಹ ಮಾಡಲು ಟೀಂವೊಂದನ್ನು ನಿಯೋಜಿಸಿದರು.

ವೆಬ್ದುನಿಯಾವನ್ನು ಓದಿ

ಸಂಬಂಧಿಸಿದ ಸುದ್ದಿ