ಇಂದು ಮಾಧ್ಯಮ ಪ್ರತಿನಿಧಿಗಳ ಜೊತೆ ಮಾತನಾಡಿದ ಅವರು, ಯಾತ್ರೆಯಲ್ಲಿ ನಮ್ಮ ಪಕ್ಷದ ಎಲ್ಲ ಹಿರಿಯ ಮುಖಂಡರು ಭಾಗವಹಿಸುತ್ತಾರೆ. ಜನಾಕ್ರೋಶ ಯಾತ್ರೆ 4 ಹಂತಗಳಲ್ಲಿ ನಡೆಯಲಿದೆ. ಇವತ್ತು ಮೈಸೂರು, ನಾಳೆ ಮಂಡ್ಯ, ಹಾಸನ, ನಾಡಿದ್ದು ಮಡಿಕೇರಿ, ಮಂಗಳೂರು- ಹೀಗೆ ಪ್ರತಿ ಜಿಲ್ಲಾ ಕೇಂದ್ರಗಳಿಗೆ ನಮ್ಮ ಜನಾಕ್ರೋಶ ಯಾತ್ರೆ ತೆರಳುತ್ತದೆ ಎಂದರು.
ಅಯೋಗ್ಯ ಕಾಂಗ್ರೆಸ್ ಸರಕಾರದ ಬೆಲೆ ಏರಿಕೆ, ಮುಸ್ಲಿಮರಿಗೆ ಸರಕಾರಿ ಕಾಮಗಾರಿಗಳಲ್ಲಿ ಮೀಸಲಾತಿ, ದಲಿತರ ಅಭ್ಯುದಯಕ್ಕೆ ಮೀಸಲಿಟ್ಟ ಎಸ್‍ಇಪಿ, ಟಿಎಸ್‍ಪಿ ಹಣದ ವಿಚಾರದಲ್ಲಿ ದೋಖಾ ಸೇರಿ ಜನವಿರೋಧಿ ನೀತಿಯನ್ನು ರಾಜ್ಯದ ಜನರಿಗೆ ತಿಳಿಸುತ್ತೇವೆ ಎಂದು ವಿವರಿಸಿದರು.