ವಿನಯ್ ಸೋಮಯ್ಯ ಆತ್ಮಹತ್ಯೆ: ಸೂಕ್ತ ತನಿಖೆಗೆ ವಿಜಯೇಂದ್ರ ಆಗ್ರಹ
ವಿನಯ್ ಸೋಮಯ್ಯ ಆತ್ಮಹತ್ಯೆ ಮಾಡಿಕೊಳ್ಳುವಷ್ಟು ಮಾನಸಿಕ ಒತ್ತಡ ಉಂಟಾಗಲು ಕಾರಣರಾದವರ ವಿರುದ್ಧ ರಾಜ್ಯ ಸರ್ಕಾರ ಈ ಕೂಡಲೇ ಕಠಿಣ ಕಾನೂನು ಕ್ರಮ ಕೈಗೊಳ್ಳಬೇಕೆಂದು ಒತ್ತಾಯಿಸುವೆ. ಮೃತ ಕಾರ್ಯಕರ್ತ ವಿನಯ್ ಅವರ ನಿಧನದ ನೋವಿನಲ್ಲಿರುವ ಕುಟುಂಬ ವರ್ಗದವರಿಗೆ ದುಃಖ ಸಹಿಸುವ ಶಕ್ತಿಯನ್ನು ಭಗವಂತನು ಕರುಣಿಸಲಿ. ವಿನಯ್ ಅವರ ಆತ್ಮಕ್ಕೆ ಚಿರಶಾಂತಿ ದೊರೆಯಲಿ.