ನೀತಿ ಸಂಹಿತೆ ಉಲ್ಲಂಘನೆ ; ಕೋಡಿಮಠದ ಶ್ರೀಗಳಿಗೆ ಸಹಾಯಕ ಚುನಾವಣಾಧಿಕಾರಿಗಳಿಂದ ನೋಟಿಸ್

ಗುರುವಾರ, 14 ಮಾರ್ಚ್ 2019 (12:10 IST)
ಯಾದಗಿರಿ : ಲೋಕಸಭಾ ಚುನಾವಣೆ ಬಗ್ಗೆ ಭವಿಷ್ಯ ನುಡಿದಿದ್ದ ಕೋಡಿಮಠದ ಶ್ರೀ ಶಿವಾನಂದ ರಾಜೇಂದ್ರ ಸ್ವಾಮೀಜಿಗಳಿಗೆ ಸಹಾಯಕ ಚುನಾವಣಾಧಿಕಾರಿಗಳು ನೋಟಿಸ್ ಜಾರಿ ಮಾಡಿದ್ದಾರೆ.


2019ರ ಲೋಕಸಭಾ ಚುನಾವಣೆಯ ನೀತಿ ಸಂಹಿತೆ ಮಾರ್ಚ್ 10 ರಿಂದಲೇ ಜಾರಿಯಾಗಿತ್ತು. ಆದರೆ ಮಾರ್ಚ್ 11 ರಂದು ನಡೆದ ಜಾತ್ರೆಯಲ್ಲಿ ಕೋಡಿಮಠದ ಶ್ರೀ ಶಿವಾನಂದ ರಾಜೇಂದ್ರ ಸ್ವಾಮೀಜಿ, ‘ಸತ್ಯ ವಿಷದಂತೆ ಇರುತ್ತೆ ಕುರುವಂಶ ದೊರೆಗಳು ಬಡಿದಾಡ್ಯಾರು ಪಾಂಡವರು ಕೌರವರು ಬಡಿದಾಡ್ಯಾರು, ರತ್ನ ಖಚಿತ ಸುವರ್ಣ ಕಿರೀಟ ಸ್ಥಿರವಾದಿತು’ ಎಂದು ಭವಿಷ್ಯ ನುಡಿದಿದ್ದರು.


ಈ ಹೇಳಿಕೆಯಿಂದ ನೀತಿ ಸಂಹಿತೆ ಉಲ್ಲಂಘನೆ ಮಾಡಿದ್ದಾರೆ ಎಂದು ಶ್ರೀಗಳಿಗೆ ಸಹಾಯಕ ಚುನಾವಣಾಧಿಕಾರಿಗಳಾದ ಶಂಕರಗೌಡ ಸೋಮನಾಳ ಅವರು ಯಾದಗಿರಿ ಗ್ರಾಮೀಣ ಠಾಣೆ ಪಿಎಸ್‍ ಐ ಮೂಲಕ ನೋಟಿಸ್ ನೀಡಿದ್ದಾರೆ. ನೀವು ಹೇಳಿಕೆ ನೀಡಿರುವುದು ನಿಜವಾದಲ್ಲಿ ಇದು ಮತದಾರರ ಮೇಲೆ ಪ್ರಭಾವ ಬೀರುತ್ತದೆ. ಅದ್ದರಿಂದ 48 ಗಂಟೆಗಳ ಒಳಗೆ ನಿಲಿತ ರೂಪದಲ್ಲಿ ಉತ್ತರಿಸುವಂತೆ ನೋಟಿಸ್ ನಲ್ಲಿ ತಿಳಿಸಲಾಗಿದೆ


ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ ಮೊಬೈಲ್ ಆ್ಯಪ್ ಡೌನ್‍ ಲೋಡ್ ಮಾಡಿಕೊಳ್ಳಿ.

ವೆಬ್ದುನಿಯಾವನ್ನು ಓದಿ

ಸಂಬಂಧಿಸಿದ ಸುದ್ದಿ