ನೀತಿ ಸಂಹಿತೆ ಉಲ್ಲಂಘಿಸಿದ ಸಚಿವೆ ಲಕ್ಷ್ಮಿ ಹೆಬ್ಬಾಳ್ಕರ್‌ಗೆ ಸಮನ್ಸ್‌ ಜಾರಿ

Sampriya

ಶುಕ್ರವಾರ, 29 ಮಾರ್ಚ್ 2024 (14:57 IST)
ಬೆಂಗಳೂರು: ನೀತಿ ಸಂಹಿತಿ ಉಲ್ಲಂಘನೆ ಆರೋಪದಲ್ಲಿ ಸಚಿವೆ ಲಕ್ಷ್ಮಿ ಹೆಬ್ಬಾಳ್ಕರ್ ಅವರಿಗೆ ಬೆಂಗಳೂರಿನ ಜನಪ್ರತಿನಿಧಿಗಳ ವಿಶೇಷ ನ್ಯಾಯಾಲಯ ಗುರುವಾರ ಐಪಿಸಿ ಕಲಂ 188ರ ಅಡಿ ಸಮನ್ಸ್‌ ಜಾರಿ ಮಾಡಿ ಆದೇಶ ಹೊರಡಿಸಿದೆ.

ಮಾರ್ಚ್ 20ರಂದು ಬೆಳಗಾವಿಯ ಕುವೆಂಪು ನಗರದ ತಮ್ಮ ಗೃಹ ಕಚೇರಿ ಸಮೀಪದ ಸಭಾಂಗಣದಲ್ಲಿ ಲಕ್ಷ್ಮಿ ಹೆಬ್ಬಾಳ್ಕರ್ ಅಂಗನವಾಡಿ ಕಾರ್ಯಕರ್ತೆಯರು, ಸಹಾಯಕಿಯರು, ಆಶಾ ಕಾರ್ಯಕರ್ತೆಯರ ಜೊತೆ ಸಭೆ ನಡೆಸಿದ್ದರು. ಈ ಸಂಬಂಧ ಸ್ಥಳೀಯರೊಬ್ಬರು ಅಧಿಕಾರಿಗಳಿಗೆ ಮಾಹಿತಿ ನೀಡಿದ್ದರು.

ಅಧಿಕಾರಿಗಳು ಸ್ಥಳಕ್ಕೆ ದಾಳಿ ನಡೆಸಿ ಪ್ರಕರಣ ದಾಖಲಿಸಿಕೊಂಡಿದ್ದರು. ಏಪ್ರಿಲ್ 30ರೊಳಗೆ ಉತ್ತರ ನೀಡುವಂತೆ ಸಮನ್ಸ್‌ ಜಾರಿ ಮಾಡಲಾಗಿದೆ.

ಎರಡನೇ ಆರೋಪಿಯಾಗಿ ಸಭೆಗೆ ಅವಕಾಶ ಮಾಡಿಕೊಟ್ಟ ಸಭಾಂಗಣದ ಮಾಲೀಕ ಉಮೇಶ ಮಲ್ಲಪ್ಪ ವಾಸಣ್ಣ ಎಂಬವರಿಗೂ ಸಮನ್ಸ್‌ ಜಾರಿ ಮಾಡಲಾಗಿದೆ ಎನ್ನುವ ಮಾಹಿತಿ ಲ ಇದೆ.

ವೆಬ್ದುನಿಯಾವನ್ನು ಓದಿ

ಸಂಬಂಧಿಸಿದ ಸುದ್ದಿ