ಕಾವೇರಿ ಕಿಚ್ಚು: 335 ಜನರ ಬಂಧನ, ಕರ್ಪ್ಯೂ ಮುಂದುವರಿಕೆ

ಬುಧವಾರ, 14 ಸೆಪ್ಟಂಬರ್ 2016 (10:05 IST)
ಕಾವೇರಿ ವಿಚಾರದಲ್ಲಿ ನಡೆದ ಹಿಂಸಾಚಾರಕ್ಕೆ ಸಂಬಂಧಿಸಿದಂತೆ ಒಟ್ಟು 335 ಮಂದಿಯನ್ನು ಬಂಧಿಸಲಾಗಿದ್ದು, ಇಂದು ಕೂಡಾ ನಗರದಲ್ಲಿ ನಿಷೇದಾಜ್ಞೆ ಮುಂದುವರಿಯುತ್ತದೆ ಎಂದು ಡಿಜಿಪಿ ಓಂ ಪ್ರಕಾಶ್ ತಿಳಿಸಿದ್ದಾರೆ.
 
ಬೆಂಗಳೂರಿನಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಘಟನೆಯಲ್ಲಿ 21 ಲಾರಿ, 44 ಬಸ್, ಏಳು ಪೊಲೀಸ್ ವಾಹನಗಳು ಬೆಂಕಿಗೆ ಆಹುತಿಯಾಗಿದೆ ಎಂದು ಹೇಳಿದರು. 
 
ಕಾವೇರಿ ವಿಚಾರದಲ್ಲಿ ಉಭಯ ರಾಜ್ಯಗಳಲ್ಲಿ ಹಿಂಸಾಚಾರ ಭುಗಿಲೆದಿದ್ದು, ತೀರ್ಪಿಗೂ ಮೊದಲೇ ರಾಜ್ಯದಲ್ಲಿ ಗಲಾಟೆ ಆರಂಭವಾಗಿತ್ತು. ಸೋಮವಾರ ತೀರ್ಪು ಪ್ರಕಟವಾದ ಮೇಲೆ ಗಲಾಟೆ ಮತ್ತಷ್ಟು ವಿಕೋಪಕ್ಕೆ ತಿರುಗಿತ್ತು. ಸದ್ಯ ಪರಿಸ್ಥಿತಿ ನಿಯಂತ್ರಣದಲ್ಲಿದೆ. ಸೂಕ್ಷ್ಮ ಪ್ರದೇಶಗಳಲ್ಲಿ ಹೆಚ್ಚುವರಿ ಪೊಲೀಸ್ ಪಡೆಗಳನ್ನು ನಿಯೋಜಿಸಲಾಗಿದೆ. ಪರಿಸ್ಥಿತಿ ನೋಡಿಕೊಂಡು ಕರ್ಪ್ಯೂ ಸಡಿಲಿಕೆ ಮಾಡಲಾಗುವುದು ಎಂದು ಡಿಜಿಪಿ ಓಂ ಪ್ರಕಾಶ್ ಹೇಳಿದರು.

ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ ಮೊಬೈಲ್ ಆ್ಯಪ್ ಡೌನ್‍ಲೋಡ್ ಮಾಡಿಕೊಳ್ಳಿ 

ವೆಬ್ದುನಿಯಾವನ್ನು ಓದಿ