ಹಿಂಸಾ ಗ್ಯಾರಂಟಿ ಸ್ಕೀಮ್ ಸಹಿಸುವುದಿಲ್ಲ: ಕಟೀಲ್ ಎಚ್ಚರಿಕೆ

ಮಂಗಳವಾರ, 16 ಮೇ 2023 (12:20 IST)
ಬೆಂಗಳೂರು : ಕೆಲ ಕ್ಷೇತ್ರಗಳಲ್ಲಿ ಬಿಜೆಪಿ-ಕಾಂಗ್ರೆಸ್ ಕಾರ್ಯಕರ್ತರ ಮಧ್ಯೆ ಗಲಾಟೆ ಹಿನ್ನೆಲೆಯಲ್ಲಿ ಬಿಜೆಪಿ ರಾಜ್ಯಾಧ್ಯಕ್ಷ ನಳಿನ್ ಕುಮಾರ್ ಕಟೀಲ್ ಎಚ್ಚರಿಕೆ ನೀಡಿದ್ದಾರೆ.

ಕಾಂಗ್ರೆಸ್ ನಾಯಕರು ಇಂತಹ ಹಿಂಸಾಚಾರದ ಪ್ರವೃತ್ತಿಗೆ ಆಸ್ಪದ ಕೊಡಬಾರದು. ರಾಜ್ಯದ ವಿವಿಧ ಕಡೆಗಳಲ್ಲಿ ದೇಶದ್ರೋಹಿ ಚಟುವಟಿಕೆಗಳು ಹೆಚ್ಚಾಗಿವೆ. ಇದನ್ನು ತಡೆಯಬೇಕು. ಪಾಕಿಸ್ತಾನದ ಧ್ವಜ ಹಾರಿಸುವುದು ದೇಶದ್ರೋಹದ ಚಟುವಟಿಕೆಯಾಗಿದೆ. ಇದನ್ನು ನಿಯಂತ್ರಿಸಬೇಕು.

ಯಾವುದೇ ಕಾರಣಕ್ಕೂ ಇಂತಹ ಹಿಂಸಾಚಾರದ ದೇಶದ್ರೋಹಿ ಚಟುವಟಿಕೆಗಳನ್ನು ಸಹಿಸಲು ಸಾಧ್ಯವಿಲ್ಲ. ಕಾಂಗ್ರೆಸ್ ಮುಖಂಡರು ತಮ್ಮೊಳಗಿನ ಭಿನ್ನಮತವನ್ನು ಬದಿಗಿಡಬೇಕು ಎಂದು ಹೇಳಿದರು.

ವೆಬ್ದುನಿಯಾವನ್ನು ಓದಿ

ಸಂಬಂಧಿಸಿದ ಸುದ್ದಿ