ಈ ಬಗ್ಗೆ ಕೇಂದ್ರ ಆರೋಗ್ಯ ಸಚಿವಾಲಯ ಮಾಹಿತಿ ನೀಡಿದೆ.ಸೋಂಕಿತರ ಪೈಕಿ ಒಬ್ಬನ ವಯಸ್ಸು 66, ಮತ್ತೊಬ್ಬನ ವಯಸ್ಸು 46. ಇವರಿಬ್ಬರೂ ದಕ್ಷಿಣ ಆಫ್ರಿಕಾದಿಂದ ಕರ್ನಾಟಕಕ್ಕೆ ಬಂದಿದ್ದಾರೆ. ತಪಾಸಣೆ ಮಾಡಿದಾಗ ಇಬ್ಬರಲ್ಲೂ ಒಮಿಕ್ರಾನ್ ಸೋಂಕು ದೃಢಪಟ್ಟಿದೆ. ಆ ಮೂಲಕ ಭಾರತ ದೇಶದಲ್ಲೇ ಇದು ಮೊದಲ ಪ್ರಕರಣ ಆಗಿದೆ.
ಆರೋಗ್ಯ ಸಚಿವಾಲಯದ ಜಂಟಿ ಕಾರ್ಯದರ್ಶಿ ಲಾವ್ ಅಗರ್ವಾಲ್ ಅವರು ಈ ಬಗ್ಗೆ ಸುದ್ದಿಗೋಷ್ಠಿಯಲ್ಲಿ ಖಚಿತ ಪಡಿಸಿದ್ದಾರೆ. ಸೋಂಕಿತರ ಪ್ರಾಥಮಿಕ ಮತ್ತು ದ್ವಿತೀಯ ಸಂಪರ್ಕಿತರನ್ನು ಪತ್ತೆ ಹಚ್ಚಲಾಗಿದ್ದು, ಅವರನ್ನು ಪರೀಕ್ಷೆಗೆ ಒಳಪಡಿಸಲಾಗಿದೆ. ಜನತೆ ಭಯ ಪಡಬೇಡಿ. ಆದರೆ ಜಾಗ್ರತೆ ವಹಿಸಿ ಎಂದು ತಿಳಿಸಿದ್ದಾರೆ.
ದೆಹಲಿ ಪ್ರವಾಸದಲ್ಲಿರುವ ಸಿಎಂ ಬೊಮ್ಮಾಯಿ, ಕರ್ನಾಟಕದಲ್ಲಿ ಒಮಿಕ್ರಾನ್ ಕೇಸ್ ಪತ್ತೆಯಾಗಿದ್ದರ ಕುರಿತು ಮಾತನಾಡಿದ್ದಾರೆ. ಕರ್ನಾಟಕಕ್ಕೆ ಇದೊಂದು ದೊಡ್ಡ ಸವಾಲು. ಒಮಿಕ್ರಾನ್ ತಡೆಯೋ ಬಗ್ಗೆ ತಜ್ಞರ ಜತೆ ಚರ್ಚಿಸಿದ್ದೇವೆ, 13 ದೇಶದಲ್ಲಿ ಒಮಿಕ್ರಾನ್ ಹೆಚ್ಚಾಗಿದೆ. ಪ್ರತಿ ವಿದೇಶಿ ಪ್ರವಾಸಿಗರ ಮೇಲೆ ನಿಗಾ ಇಟ್ಟಿದ್ದೇವೆ. ವಿದೇಶದಿಂದ ಬಂದವರಿಗೆ 7 ದಿನ ಕ್ವಾರಂಟೈನ್ ಮಾಡಲಾಗುತ್ತಿದೆ. ಮಾನಮ್ಮ ಜನರ ಆರೋಗ್ಯ ರಕ್ಷಣೆಯನೇ ನಮ್ಮ ಆದ್ಯ ಕರ್ತವ್ಯ. ಒಬ್ಬನಿಂದ ಇಡೀ ನಗರಕ್ಕೆ ಸೋಂಕು ಹರಡುವುದನ್ನು ತಡೆಯಬೇಕು ಎಂದು ಸಿಎಂ ಹೇಳಿದ್ದಾರೆ.