ಗ್ಯಾಂಗ್‌ರೇಪ್‌ಗೊಳಗಾದ ಬಾಲಕಿ ಭೇಟಿ ಮಾಡಿದ ವಿ.ಎಸ್.ಉಗ್ರಪ್ಪ
ಭಾನುವಾರ, 4 ಜೂನ್ 2017 (17:07 IST)
ಕಾಮುಕರಿಂದ ಗ್ಯಾಂಗ್‌ರೇಪ್‌ಗೊಳಗಾದ 5 ವರ್ಷದ ಬಾಲಕಿಯನ್ನು ಮಕ್ಕಳು ಮತ್ತು ಮಹಿಳಾ ದೌರ್ಜನ್ಯ ತಡೆ ಸಮಿತಿ ಅಧ್ಯಕ್ಷ ವಿ.ಎಸ್.ಉಗ್ರಪ್ಪ ಭೇಟಿ ಮಾಡಿ ಆರೋಗ್ಯ ವಿಚಾರಿಸಿದ್ದಾರೆ.
ಇಂದು ಆಸ್ಪತ್ರೆಗೆ ಭೇಟಿ ನೀಡಿದ ಉಗ್ರಪ್ಪ, ಬಾಲಕಿಗೆ ಚಿಕಿತ್ಸೆ ನೀಡುತ್ತಿರುವ ವೈದ್ಯರೊಂದಿಗೆ ಚರ್ಚಿಸಿ, ಉತ್ತಮ ಚಿಕಿತ್ಸೆ ನೀಡುವಂತೆ ಕೋರಿದ್ದಾರೆ ಎಂದು ಮೂಲಗಳು ತಿಳಿಸಿವೆ.
ಸುದ್ದಿಗಾರರೊಂದಿಗೆ ಮಾತನಾಡಿದ ಉಗ್ರಪ್ಪ, ಬಾಲಕಿಯ ಜೀವಕ್ಕೆ ತೊಂದರೆಯಿಲ್ಲ. ಉತ್ತಮ ಚಿಕಿತ್ಸೆ ದೊರೆತಲ್ಲಿ ಶೀಘ್ರ ಗುಣಮುರಾಗಲಿದ್ದಾರೆ. ಬಾಲಕಿಗೆ ಅಗತ್ಯವಾದ ಅತ್ಯಾಧುನಿಕ ಚಿಕಿತ್ಸೆ ನೀಡುವಂತೆ ವೈದ್ಯರಿಗೆ ಸಲಹೆ ನೀಡಿದ್ದಾಗಿ ತಿಳಿಸಿದ್ದಾರೆ.
ವೈಯಾಲಿಕಾವಲ್ ಸೊಸೈಟಿ ಬಳಿಯಲ್ಲಿ ಈ ಘಟನೆ ನಡೆದಿದೆ. ಆಟವಾಡುತ್ತಿದ್ದ ಬಾಲಕಿಯನ್ನು ಅಪಹರಿಸಿ ನಿರ್ಜನ ಪ್ರದೇಶಕ್ಕೆ ಕರೆದೊಯ್ದ ಕಿರಾತಕರು ಅತ್ಯಾಚಾರವೆಸಗಿದ್ದರು. ಅರೆ ಪ್ರಜ್ಞಾವಸ್ಥೆಯಲ್ಲಿದ್ದ ಬಾಲಕಿಯನ್ನು ಸದ್ಯಕ್ಕೆ ಬೌರಿಂಗ್ ಆಸ್ಪತ್ರೆಗೆ ದಾಖಲಿಸಲಾಗಿತ್ತು.
ಕೆ.ಜಿ. ಹಳ್ಳಿ ಪೊಲಿಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಆದರೆ ಸ್ಥಳದಲ್ಲಿ ಸಿಸಿಟಿವಿ ಕ್ಯಾಮರಾ ಮೂಲಕ ಒಬ್ಬ ಆರೋಪಿಯನ್ನು ಪೊಲೀಸರು ಬಂಧಿಸುವಲ್ಲಿ ಯಶಸ್ವಿಯಾಗಿದ್ದಾರೆ ಎಂದು ವಿ.ಎಸ್.ಉಗ್ರಪ್ಪ ತಿಳಿಸಿದ್ದಾರೆ.
ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ ಮೊಬೈಲ್ ಆ್ಯಪ್ ಡೌನ್‍ಲೋಡ್ ಮಾಡಿಕೊಳ್ಳಿ.