ಧಾರವಾಡದಲ್ಲಿ ಐಐಟಿ ಉದ್ಘಾಟನೆ ಮಾಡಲು ಆಗಮಿಸಿದ್ದಕ್ಕೆ ಸಂತೋಷವಾಗಿದೆ. ಇದರಿಂದ ವಿದ್ಯಾಕಾಶಿ ಹಾಗೂ ಸಾಂಸ್ಕೃತಿಕ ನಗರಿಗೆ ಹೊಸ ಗರಿ ಬರುತ್ತಿರುವುದು ಹೆಮ್ಮೆಯ ಸಂಗತಿ. ಕಾಯ್ದು ನೋಡಿ, ರಾಜ್ಯಕ್ಕೆ ಇನ್ನಷ್ಟು ಯೋಜನೆಗಳನ್ನು ನೀಡುವ ಮೂಲಕ ಕರ್ನಾಟಕಕ್ಕೆ ಮತ್ತಷ್ಟು ಸಿಹಿ ಸುದ್ದಿ ನೀಡುತ್ತೇನೆ ಎಂದು ಕೇಂದ್ರ ಮಾನವ ಸಂಪನ್ಮೂಲ ಖಾತೆ ಸಚಿವ ಪ್ರಕಾಶ್ ಜಾವ್ಡೇಕರ್ ಹೇಳಿದರು.
ಸುದ್ದಿಗಾರರೊಂದಿಗೆ ಮಾತನಾಡಿದ ಕೇಂದ್ರ ಸಚಿವರು, ಪ್ರಧಾನಿ ನರೇಂದ್ರ ಮೋದಿ ಅವರ ದೂರದೃಷ್ಟಿಯಿಂದ ತಿರಂತ ಯಾತ್ರೆ ಮಾಡುತ್ತಿದ್ದೇವೆ. ಸ್ವಾತಂತ್ರ್ಯ ಹೋರಾಟದಲ್ಲಿ ಭಾಗಿಯಾಗಿದ್ದ ಹುಬ್ಬಳ್ಳಿಯ ಚೆನ್ನಮ್ಮ ರತ್ನಕಟ್ಟಿಯವರನ್ನು ಸನ್ಮಾನಿಸುತ್ತಿದ್ದೇವೆ ಎಂದು ತಿಳಿಸಿದರು.
ರೋಹಿತ್ ವೇಮುಲ ಪ್ರಕರಣ..........
ರೋಹಿತ್ ವೇಮುಲ ಆತ್ಮಹತ್ಯ ಪ್ರಕರಣಕ್ಕೆ ಸಂಬಂಧಿಸಿದಂತೆ ನ್ಯಾಯಮೂರ್ತಿ ಎ.ಕೆ.ರೂಪಣಕರ್ ಸಮಿತಿ ವರದಿ ನೀಡಿದೆ. ಸಮಿತಿ ನೀಡಿರುವ ವರದಿ ಪರಿಶೀಲಿಸಿ ಸೂಕ್ತ ಕ್ರಮ ಕೈಗೊಳ್ಳಲಾಗುತ್ತದೆ ಎಂದು ಭರವಸೆ ನೀಡಿದರು.
ಮಹದಾಯಿ ಹೋರಾಟಗಾರರ ಮನವಿ......
ಇದೇ ವೇಳೆ, ಮಹದಾಯಿ ನದಿ ನೀರು ಹಂಚಿಕೆ ವಿವಾದಕ್ಕೆ ಸಂಬಂಧಿಸಿದಂತೆ ಪ್ರಧಾನಿ ನರೇಂದ್ರ ಮೋದಿಯವರು ಮಧ್ಯಸ್ಥಿಕೆ ವಹಿಸುವಂತೆ ಆಗ್ರಹಿಸಿ ಮಹದಾಯಿ ಹೋರಾಟಗಾರರು ಕೇಂದ್ರ ಮಾನವ ಸಂಪನ್ಮೂಲ ಸಚಿವ ಪ್ರಕಾಶ್ ಜಾವ್ಡೇಕರ್ ಅವರಿಗೆ ಮನವಿ ಸಲ್ಲಿಸಿದರು.