ಈವಾಗಲೇ ಎಚ್ಚೆತ್ತುಕೊಳ್ಳಿ ಅಲಕ್ಷ್ಯ ಮಾಡಿದ್ರೆ ಬೀಳುತ್ತೆ ದಂಡ!,
ಅಪರಾಧ ಕೃತ್ಯಗಳಲ್ಲಿ ನಕಲಿ ನೋಂದಣಿ ಸಂಖ್ಯೆಯ ವಾಹನಗಳ ಬಳಕೆಯನ್ನು ನಿಯಂತ್ರಿಸುವ ಉದ್ದೇಶದಿಂದ ದೇಶದಲ್ಲಿ ಏಕರೂಪ ನೋಂದಣಿ ಸಂಖ್ಯೆ ಫಲಕ ಅಳವಡಿಸುವ ಕಾರ್ಯಕ್ಕೆ ಚಾಲನೆ ನೀಡಲಾಗಿದೆ. ಕರ್ನಾಟಕದ ಎಲ್ಲ ಹಳೆಯ ವಾಹನಗಳ ನಂಬರ್‌ಪ್ಲೇಟ್ ಬದಲಾಯಿಸಿ ಅತಿ ಸುರಕ್ಷಿತ ನೋಂದಣಿ ಫಲಕ ಅಳವಡಿಸಿಕೊಳ್ಳುವಂತೆ ರಾಷ್ಟ್ರೀಯ ರಸ್ತೆ ಸುರಕ್ಷತೆ ಸಮಿತಿ ಸದಸ್ಯ ಡಾ ಕಮಲಜಿತ್ ಸೋಯಿ ತಿಳಿಸಿದ್ದಾರೆ.ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಅವರು HSRP ಅಂದ್ರೆ ಹೈ ಸೆಕ್ಯುರಿಟಿ ರಿಜಿಸ್ಪ್ರೇಷನ್ ಪ್ಲೇಟ್ಸ್ ಯೋಜನೆಯು ವಾಹನದ ಸುರಕ್ಷತೆ ಮತ್ತು ಭದ್ರತೆಯನ್ನು ನೀಡುವ ಮೂಲಕ ನೇರವಾಗಿ ರಾಷ್ಟ್ರೀಯ ಭದ್ರತೆಗೆ ಕೊಡುಗೆ ನೀಡುತ್ತದೆ. ಅಲ್ಲದೇ ವಾಹನ ಸಂಬಂಧಿತ ಅಪರಾಧ ಚಟುವಟಿಕೆಗಳನ್ನು ನಿರ್ಬಂಧಿಸುತ್ತದೆ. 2019 ಏಪ್ರಿಲ್ 1ಕ್ಕಿಂತ ಮುಂಚೆ ನೋಂದಣಿಯಾದ ವಾಹನಗಳು HSRP ಗಳನ್ನು ಅಳವಡಿಸಿಕೊಳ್ಳುವುದು ಕಡ್ಡಾಯವಾಗಿದೆ ಎಂದು ಹೇಳಿದ್ದಾರೆ.