ಭಾರತ ಹಾಗೂ ಪಾಕಿಸ್ತಾನದ ನಡುವೆ ಯುದ್ಧ ಖಚಿತ: ಕೋಡಿಮಠದ ಸ್ವಾಮೀಜಿ

ಸೋಮವಾರ, 10 ಅಕ್ಟೋಬರ್ 2016 (15:24 IST)
ಭಾರತ ಹಾಗೂ ಪಾಕಿಸ್ತಾನದ ಮಧ್ಯ ಯುದ್ಧ ನಡೆಯುವುದು ಖಚಿತ ಎಂದು ಕೋಡಿಮಠದ ಸ್ವಾಮೀಜಿ ಭವಿಷ್ಯ ನುಡಿದಿದ್ದಾರೆ. 
 
ಧಾರವಾಡದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಭಾರತ ಹಾಗೂ ಪಾಕಿಸ್ತಾನದ ಮಧ್ಯ ಯುದ್ಧ ನಡೆಯುವುದು ಅನಿವಾರ್ಯ. ಉಭಯ ದೇಶಗಳ ಮಧ್ಯ ಯುದ್ಧ ನಡೆಯುತ್ತದೆ ಎಂದು ವರ್ಷದ ಭವಿಷ್ಯದಲ್ಲೇ ತಿಳಿಸಿದ್ದೇ ಎಂದು ಹೇಳಿದರು.
 
ರಾಜ್ಯದಲ್ಲಿ ನೀರಿಗಾಗಿ ಹೋರಾಟಗಳು ನಡೆಯುತ್ತಿವೆ. ಮುಂದಿನ ದಿನಗಳಲ್ಲಿ ಉಸಿರಾಡುವ ಗಾಳಿಗು ಸಂಕಷ್ಟ ಬರುತ್ತದೆ ಎಂದು ಕೋಡಿಮಠದ ಸ್ವಾಮೀಜಿ ಎಚ್ಚರಿಕೆ ನೀಡಿದ್ದಾರೆ. 
 
ಉರಿ ಸೆಕ್ಟರ್ ಮೇಲೆ ಉಗ್ರರ ದಾಳಿಗೆ ಪ್ರತೀಕಾರವಾಗಿ ಭಾರತೀಯ ಸೇನೆ ಪಾಕ್ ಆಕ್ರಮಿತ ಕಾಶ್ಮೀರಕ್ಕೆ ನುಗ್ಗಿ ಸುಮಾರು 50 ಉಗ್ರರ ರಂಡವನ್ನು ಚೆಂಡಾಡಿದ್ದರ ಹಿನ್ನೆಲೆಯಲ್ಲಿ ಉಭಯ ರಾಷ್ಟ್ರಗಳ ನಡುವೆ ಯುದ್ಧದ ವಾತಾವರಣ ನಿರ್ಮಾಣವಾಗಿದೆ. 

ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ ಮೊಬೈಲ್ ಆ್ಯಪ್ ಡೌನ್‍ಲೋಡ್ ಮಾಡಿಕೊಳ್ಳಿ

ವೆಬ್ದುನಿಯಾವನ್ನು ಓದಿ

ಸಂಬಂಧಿಸಿದ ಸುದ್ದಿ