ಅಭ್ಯರ್ಥಿಗಳ ವಿರುದ್ಧ ಪೋಸ್ಟ್ ಮಾಡದಂತೆ ಎಚ್ಚರಿಕೆ
ಕೈ ಟಿಕೆಟ್ ಆಕಾಂಕ್ಷಿಗಳ ನಡುವೆ ಕಿತ್ತಾಟ ವಿಚಾರ ಸಂಬಂಧ ಕಾರ್ಯಕರ್ತರು, ಮುಖಂಡರಿಗೆ ಶಿಸ್ತುಪಾಲನಾ ಸಮಿತಿ ಎಚ್ಚರಿಕೆ ನೀಡಿದೆ. ಶಿಸ್ತುಪಾಲನಾ ಸಮಿತಿ ಅಧ್ಯಕ್ಷ ರೆಹಮಾನ್ ಖಾನ್, ಅಭ್ಯರ್ಥಿಗಳ ವಿರುದ್ಧ ಪೋಸ್ಟ್, ಕಮೆಂಟ್ ಮಾಡದಂತೆ ಎಚ್ಚರಿಕೆ ನೀಡಿದ್ದಾರೆ.. ಸಾಮಾಜಿಕ ಜಾಲತಾಣಗಳಲ್ಲಿ ಅಭ್ಯರ್ಥಿಗಳ ವಿರುದ್ಧ ಪೋಸ್ಟ್ ಮಾಡಲಾಗಿದ್ದು, ಇದಕ್ಕೆ ಶಿಸ್ತುಪಾಲನಾ ಸಮಿತಿ ಅಧ್ಯಕ್ಷ ರೆಹಮಾನ್ ಖಾನ್ ಕೆಂಡವಾಗಿದ್ದಾರೆ.