ಹವಾಮಾನ ಇಲಾಖೆಯಿಂದ ಎಚ್ಚರಿಕೆ: ಕರಾವಳಿ ಭಾಗದಲ್ಲಿ ಮುಂದಿನ ಒಂದು ವಾರ ಬಿಸಿಗಾಳಿ

Sampriya

ಶುಕ್ರವಾರ, 28 ಫೆಬ್ರವರಿ 2025 (12:49 IST)
Photo Courtesy X
ಬೆಂಗಳೂರು: ರಾಜ್ಯದಲ್ಲಿ ಜನವರಿಯ ತಿಂಗಳ ಕೊನೆಯಲ್ಲಿ ಆರಂಭವಾದ ಬಿಸಿಲ ತಾಪ, ಇದೀಗ ದಿನದಿಂದ ದಿನಕ್ಕೆ ಏರಿಕೆಯಾಗುತ್ತಲೇ ಇದೆ. ಇದೀಗ ಹವಾಮಾನ ಇಲಾಖೆ ಮುನ್ಸೂಚನೆ ಪ್ರಕಾರ ಕರಾವಳಿಯಲ್ಲಿ ಉಷ್ಣಅಲೆ ಬೀಸಲಿದ್ದು, ಉತ್ತರ ಕರ್ನಾಟಕದ ಕೆಲವು ಜಿಲ್ಲೆಗಳಲ್ಲಿ ಕೂಡಾ ಬಿಸಿಲ ಶಾಖ ಹೆಚ್ಚಿರಲಿದೆ. ಇನ್ನೂ ಉತ್ತರ ಕನ್ನಡ, ದಕ್ಷಿಣ ಕನ್ನಡ, ಉಡುಪಿ ಜಿಲ್ಲೆಗಳಲ್ಲಿ ಬಿಸಿ ಗಾಳಿ ಬೀಸಲಿದೆ.

ಇನ್ನೂ ಎಂದಿನಂತೆ ಬಾಗಲಕೋಟೆ, ಬೆಳಗಾವಿ, ಬೀದರ್, ಧಾರವಾಡ, ಗದಗ, ಹಾವೇರಿ, ಕಲಬುರಗಿ, ಕೊಪ್ಪಳ, ರಾಯಚೂರು, ವಿಜಯಪುರ, ಯಾದಗಿರಿಯಲ್ಲಿ ಉಷ್ಣಾಂಶ ಹೆಚ್ಚಿರಲಿದೆ. ‌‌

ಬೆಂಗಳೂರು ಗ್ರಾಮಾಂತರ, ಬೆಂಗಳೂರು ನಗರ, ಚಾಮರಾಜನಗರ, ಚಿಕ್ಕಬಳ್ಳಾಪುರ, ಚಿಕ್ಕಮಗಳೂರು, ಚಿತ್ರದುರ್ಗ, ದಾವಣಗೆರೆ, ಹಾಸನ, ಕೊಡಗು, ಮೈಸೂರು, ರಾಮನಗರ, ಶಿವಮೊಗ್ಗ, ತುಮಕೂರು, ವಿಜಯನಗರದಲ್ಲಿ ಪ್ರಸ್ತುತ ಇರುವ ವಾತಾವರಣವೇ ಮುಂದುವರೆಯಲಿದೆ.

ಇನ್ನೂ ಬಿಸಿಲಿ ಶಾಖ ಹೆಚ್ಚಿರುವುದರಿಂದ ಆರೋಗ್ಯದಲ್ಲೂ ಏರುಪೇರಾಗುವ ಸಾಧ್ಯತೆಯಿದೆ. ಮನೆಯಿಂದ ಹೊರಗಡೆ ಹೋಗುವಾಗ ಆದಷ್ಟು ಕಾಟನ್ ಬಟ್ಟೆಯನ್ನು ಹಾಗೂ ಸನ್‌ ಗ್ಲಾಸ್‌ ಧರಿಸಿ, ಸೂರ್ಯನ ನೇರ ಶಾಖದಿಂದ ಕಾಪಾಡಿಕೊಳ್ಳಬೇಕು.  ಇನ್ನೂ ಆದಷ್ಟು ಮಧ್ಯಾಹ್ನ 12ರಿಂದ 3ಗಂಟೆಯವರೆಗೆ ಬಿಸಿಲಿನಲ್ಲಿ ಹೋಗುವುದನ್ನು ತಪ್ಪಿಸಬೇಕು, ಬಾಯಾರಿಕೆ ಇಲ್ಲದಿದ್ದರೂ ಕೂಡ ಸಾಕಷ್ಟು ನೀರು ಕುಡಿಯಬೇಕು.

ವೆಬ್ದುನಿಯಾವನ್ನು ಓದಿ

ಸಂಬಂಧಿಸಿದ ಸುದ್ದಿ