ತಮಿಳುನಾಡಿನತ್ತ ಒಲವು ತೋರುವ ಪ್ರಧಾನಿಯಿಂದ ರಾಜ್ಯಕ್ಕೆ ಅನ್ಯಾಯ: ವಾಟಾಳ್

ಶನಿವಾರ, 21 ಜನವರಿ 2017 (19:09 IST)
ಮಹದಾಯಿ, ಕಳಸಾ ಬಂಡೂರಿ ವಿವಾದ ಬಗೆಹರಿಸಲು ಕೂಡಲೇ ಪ್ರಧಾನಿ ನರೇಂದ್ರ ಮೋದಿ ಮಧ್ಯ ಪ್ರವೇಶಿಸುವಂತೆ ಒತ್ತಾಯಿಸಿ ಜನವರಿ 23 ರಿಂದ ಕನ್ನಡ ಒಕ್ಕೂಟ ನಿರಂತರ ಹೋರಾಟ ಆರಂಭಿಸಲು ನಿರ್ಧರಿಸಿದೆ.
 
ಬೆಂಗಳೂರಿನಲ್ಲಿ ಸುದ್ದಿಗೋಷ್ಠಿ ನಡೆಸಿ ಮಾತನಾಡಿದ ಕನ್ನಡ ಒಕ್ಕೂಟದ ಅಧ್ಯಕ್ಷ ವಾಟಾಳ್ ನಾಗರಾಜ್,  4 ಭಾರಿ ರಾಜ್ಯಕ್ಕೆ ನಾಲ್ಕು ಭಾರಿ ಭೇಟಿ ನೀಡಿರುವ ಪ್ರಧಾನಿ ನರೇಂದ್ರ ಮೋದಿ ಮಹದಾಯಿ, ಕಳಸಾ ವಿವಾದಕ್ಕೆ ಸಂಬಂಧಿಸಿದಂತೆ ಯಾವುದೇ ಪ್ರತಿಕ್ರಿಯೆ ನೀಡಿಲ್ಲ. ಕೂಡಲೇ ಪ್ರಧಾನಿ ನೇತೃತ್ವದಲ್ಲಿ ಕರ್ನಾಟಕ, ಗೋವಾ ಹಾಗೂ ಮಹಾರಾಷ್ಟ್ರ ಮುಖ್ಯಮಂತ್ರಿಗಳ ಸಭೆ ನಡೆಸಿ ಸಮಸ್ಯೆ ಇತ್ಯರ್ಥಗೊಳಿಸಬೇಕೆಂದು ಆಗ್ರಹಿಸಿದರು. 
 
ಜಲ್ಲಿಕಟ್ಟು ವಿಚಾರಕ್ಕೆ ಸಂಬಂಧಿಸಿದಂತೆ ಚರ್ಚೆ ನಡೆಸಲು ಪ್ರಧಾನಿ ನರೇಂದ್ರ ಮೋದಿ ಅವರು ತಮಿಳುನಾಡು ಮುಖ್ಯಮಂತ್ರಿಗಳಿಗೆ ಅವಕಾಶ ನೀಡಿದ್ದಾರೆ. ಆದರೆ, ರಾಜ್ಯದ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ಭೇಟಿಗೆ ಸೂಕ್ತ ಸ್ಪಂದನೆ ನೀಡುತ್ತಿಲ್ಲ ಎಂದು ಕೇಂದ್ರ ಸರಕಾರದ ವಿರುದ್ಧ ಕನ್ನಡ ಒಕ್ಕೂಟದ ಅಧ್ಯಕ್ಷ ವಾಟಾಳ್ ನಾಗರಾಜ್ ವಾಗ್ದಾಳಿ ನಡೆಸಿದರು. 

ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ ಮೊಬೈಲ್ ಆ್ಯಪ್ ಡೌನ್‍ಲೋಡ್ ಮಾಡಿಕೊಳ್ಳಿ

ವೆಬ್ದುನಿಯಾವನ್ನು ಓದಿ